ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಸಿದ್ದಾರಾಮಯ್ಯ ಕಲಘಟಗಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿದರೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ : ಸಂತೋಷ ಲಾಡ್

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ಅವರಿಗಾಗಿ ಕ್ಷೇತ್ರ ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಭಾನುವಾರ ‌ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ರಾಜ್ಯದ ಅನೇಕ ಕ್ಷೇತ್ರದ ನಾಯಕರು ಆಹ್ವಾನಿಸುತ್ತಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ಆ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದು ಅವರು ಹೇಳಿದರು.

ಬಿಜೆಪಿಯವರು ಕೇವಲ ವಿವಾದದ ವಿಷಯವನ್ನೇ ಮಾತನಾಡುತ್ತಾರೆ. ಅವರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ, ಹಾಗೂ ಅವರಿಗೆ ಅಭಿವೃದ್ಧಿಯೂ ಬೇಕಾಗಿಲ್ಲ ಎಂದು ಹೇಳಿದ ಅವರು, ಪ್ರತಿಪಕ್ಷಗಳು ಸರ್ಕಾರವನ್ನು ಟೀಕಿಸಿದರೆ ಅದಕ್ಕೆ ಪ್ರತಿ ಹೇಳಿಕೆ ಕೊಡುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿ ಗಡಿ ವಾದದವು ಸುಪ್ರೀಂಕೋರ್ಟ್‌ನಲ್ಲಿದೆ. ಆದರೂ ಮಹಾರಾಷ್ಟ್ರದ ಸಚಿವರು ಅನಗತ್ಯ ವಿವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಗಡಿ ವಿಚಾರವಾಗಿ ನಾವೆಲ್ಲರೂ ಒಟ್ಟಾಗಿ ನಿಂತಿದ್ದೇವೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement