ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು :  ನಾಳೆಯಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ, ಡಿಸೆಂಬರ್ 5ರಿಂದ ಡಿಸೆಂಬರ್ 8ರ ವರೆಗೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾನಗರ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇಂದು, ಭಾನುವಾರ ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದ್ದು, ಡಿಸೆಂಬರ್ 5 ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಪ್ರಭಾವದಿಂದ ಕರ್ನಾಟಕ, ಕೇರಳದಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

3.3 / 5. 7

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement