ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಇಂದು

posted in: ರಾಜ್ಯ | 0

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಸೋಮವಾರ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಬೆಟ್ಟದ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಇಂದು(ಡಿಸೆಂಬರ್‌ 5) ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳು, ಹೊರರಾಜ್ಯಗಳಿಂದ ಭಕ್ತರು ಭಾನುವಾರವೇ ಬಂದಿದ್ದಾರೆ. ಒಂದೂವರೆಯಿಂದ ಎರಡು ಲಕ್ಷ ಹನುಮ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಗಂಗಾವತಿ ನಗರದಿಂದ ನಡೆಯಲಿರುವ ಸಂಕೀರ್ತನಾ ಯಾತ್ರೆ ವೇಳೆ ಅಹಿತಕರ ಘಟನೆ ನಡೆಯದಂತೆ ಗಂಗಾವತಿ ಹಾಗೂ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ಬೀಗಿ ಪೊಲೀಸ್​ ಬಂದೋಬಸ್ತ್ ಏರ್ಪಡಿಸಲಾಗಿದೆ. ಗಂಗಾವತಿ ಪಟ್ಟಣದಲ್ಲಿ 100ಕ್ಕೂ ಹೆಚ್ಚು ಸಿಸಿಕ್ಯಾಮರಾ ಅಳವಡಿಕೆ ಮಾಡಿದ್ದಾರೆ. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಹನುಮ ಮಾಲಾಧಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.ಮಧ್ಯರಾತ್ರಿಯಿಂದಲೇ ಬರೋಬ್ಬರಿ 572 ಮೆಟ್ಟಿಲು ಬೆಟ್ಟ ಹತ್ತಿ ಮಾಲೆ ವಿಸರ್ಜನೆ ಮಾಡುತ್ತಿದ್ದಾರೆ.
ಭಕ್ತರಿಗೆ ಜಿಲ್ಲಾಡಳಿತ ಉಪಾಹಾರ, ಊಟದ ವ್ಯವಸ್ಥೆ ಮಾಡಿದೆ. ಗಂಗಾವತಿ, ಕೊಪ್ಪಳ, ಹೊಸಪೇಟೆ, ಬಳ್ಳಾರಿ ಕಡೆಯಿಂದ ಬರುವವರಿಗೆ ಅಲ್ಲಲ್ಲಿ ಊಟ, ನೀರಿನ ವ್ಯವಸ್ಥೆ ಮಾಡಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ: ಪ್ರಜಾಧ್ವನಿ ಯಾತ್ರೆ ವೇಳೆ ಬಸ್‌ ಮೇಲಿಂದ ಹಣ ಎಸೆದ ಡಿ.ಕೆ. ಶಿವಕುಮಾರ...!

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement