ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್‌.ಕೆ. ಭಗವಾನ್ (S.K Bhagavan) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
89 ವರ್ಷ ವಯಸ್ಸಿನ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅವರು ಕನ್ನಡ ಚಿತ್ರರಂಗದಲ್ಲಿ ಭಗವಾನ್ ಎಂದೇ ಪ್ರಸಿದ್ಧಿಯಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಕನ್ನಡ ಸಿನಿರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಗುರುತಿಸಿಕೊಂಡಿದ್ದಾರೆ. ಭಗವಾನ್‌ ಅವರು ವಿಪರೀತ ಶೀತದಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಹೀಗಾಗಿ ಕಳೆದ ಎರಡು ದಿನಗಳ ಹಿಂದೆಯೇ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿರುವ ಹಿನ್ನೆಲೆ ಐಸಿಯುನಲ್ಲಿ ದಾಖಲಿಸಿ ಡಾ. ಮಂಜುನಾಥ್ ಅವರ ನೇತೃತ್ವದಲ್ಲಿ ಭಗವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಅವರು ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಕನ್ನಡದ ಸಾಕಷ್ಟು ಹಿಟ್‌ ಸಿನಿಮಾಗಳನ್ನ ನಿರ್ದೇಶಿಸಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement