ಮತಗಟ್ಟೆಗೆ ತೆರಳಿ ಮತಚಲಾಯಿಸಿದ 100ನೇ ವರ್ಷಕ್ಕೆ ಕಾಲಿಟ್ಟಿರುವ ಪ್ರಧಾನಿ ಮೋದಿ ತಾಯಿ

ಗಾಂಧಿನಗರ; 2022ರ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದ ಸಂದರ್ಭದಲ್ಲಿ 100 ನೇ ವರ್ಷಕ್ಕೆ ಪದಾರ್ಪಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಸೋಮವಾರ ರೇಸಾನ್ ಗ್ರಾಮದ (ಗಾಂಧಿನಗರದ ಸಮೀಪ) ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಜೂನ್‌ನಲ್ಲಿ 100 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ – ಕುಟುಂಬ ಸದಸ್ಯರ ಸಹಾಯದಿಂದ ಗಾಲಿಕುರ್ಚಿಯಲ್ಲಿ ಬೂತ್ ತಲುಪಿದರು ಎಂದುವರದಿಗಳು ತಿಳಿಸಿವೆ.
ಎರಡನೇ ಮತ್ತು ಅಂತಿಮ ಹಂತದ ಮತದಾನವಾಗಿರುವ ಇಂದು, ಸೋಮವಾರದ ಮತದಾನಕ್ಕೂ ಮುನ್ನ ಭಾನುವಾರ ಸಂಜೆ ಪ್ರಧಾನಿ ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಇಂದು ಮುಂಜಾನೆ, ಪ್ರಧಾನಿ ಮೋದಿ ಅವರು ಸಬರಮತಿ ಕ್ಷೇತ್ರದ ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿ ಮತದಾನ ಮಾಡಿದರು. ಮತದಾನ ಮಾಡಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ಪ್ರಜಾಪ್ರಭುತ್ವದ ಹಬ್ಬವನ್ನು ಗುಜರಾತ್, ಹಿಮಾಚಲ ಪ್ರದೇಶ ಮತ್ತು ದೆಹಲಿಯ ಜನರು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದಾರೆ, ನಾನು ದೇಶದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ಶಾಂತಿಯುತವಾಗಿ ಚುನಾವಣೆ ನಡೆಸಿದ್ದಕ್ಕೆ ನಾನು ಚುನಾವಣಾ ಆಯೋಗವನ್ನು ಅಭಿನಂದಿಸಲು ಬಯಸುತ್ತೇನೆ ಎಂದು ಹೇಳಿದರು.
ಒಟ್ಟು ಗುಜರಾತಿನ 182 ವಿಧಾನಸಭಾ ಕ್ಷೇತ್ರಗಳ ಪೈಕಿ 93 ಸ್ಥಾನಗಳಿಗೆ ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಬೆಳಗ್ಗೆ ಮನವಿ ಮಾಡಿದ್ದರು.
ಭಾರತದ ವಿವಿಧ ಭಾಗಗಳಲ್ಲಿ ಉಪಚುನಾವಣೆಗಳೂ ನಡೆಯುತ್ತಿವೆ. ಈ ಉಪಚುನಾವಣೆಗಳಿಗೆ ಸಾಕ್ಷಿಯಾಗಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತ ಚಲಾಯಿಸುವಂತೆ ನಾನು ಕೇಳಿಕೊಳ್ಳುತ್ತೇನೆ, ”ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement