ವಿದ್ಯಾರ್ಥಿಗಳ ಗಮನಕ್ಕೆ….ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ (SSLC Exam) ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿದೆ.
ಈಗಾಗಲೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಬಂದಂತ ಆಕ್ಷೇಪಣೆಗಳ ನಂತರ ಈಗ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
ಈ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್‌ 31ರಿಂದ ಏಪ್ರಿಲ್‌ 15ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ ತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
ಎಸ್ಎಸ್ಎಲ್‌ಸಿ ಮುಖ್ಯ ಪರೀಕ್ಷೆಯ ವಿಷಯವಾರು ಅಂತಿಮ ವೇಳಾಪಟ್ಟಿ
ಮಾರ್ಚ್ 31 – ಪ್ರಥಮ ಭಾಷೆ
ಏಪ್ರಿಲ್ 4 – ಗಣಿತ/ಸಮಾಜಶಾಸ್ತ್ರ
ಏಪ್ರಿಲ್ 6 – ದ್ವಿತೀಯ ಭಾಷೆ
ಏಪ್ರಿಲ್ 8 – ಅರ್ಥಶಾಸ್ತ್ರ,
ಏಪ್ರಿಲ್ 10 – ಪೊಲಿಟಿಕಲ್ ಸೈನ್ಸ್/ವಿಜ್ಞಾನ
ಏಪ್ರಿಲ್ 12 – ತೃತೀಯ ಭಾಷೆ ಹಿಂದಿ
ಏಪ್ರಿಲ್ 15 – ಸಮಾಜ ವಿಜ್ಞಾನ

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement