ಬೆಂಗಳೂರು ನಗರ : ಶಾಲೆಗಳ ಬಳಿ ವಾಹನ ನಿಲುಗಡೆ ನಿಷೇಧ, ಶಾಲಾ ವಾಹನಗಳಿಗೂ ಅನ್ವಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ನಿವಾರಣೆಗೆ ಸುಧಾರಣಾ ಕ್ರಮಗಳನ್ನು ಜಾರಿ ಮಾಡುತ್ತಿರುವ ಬೆಂಗಳೂರು ಸಂಚಾರ ಪೊಲೀಸರು ಈಗ ಶಾಲೆಗಳ ಬಳಿ ವಾಹನ ನಿಲುಗಡೆಗೆ ಮಾಡುವುದನ್ನು ನಿಷೇಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ವಿಶೇಷ ಪೊಲೀಸ್ ಆಯುಕ್ತ(ಸಂಚಾರ) ಡಾ.ಎಂ.ಎ.ಸಲೀಂ ಅವರು ಬೆಳಿಗ್ಗೆ 8:30 ರ ನಂತರ ಶಾಲಾ ಬಸ್‌ಗಳ ಸಂಚಾರವನ್ನು ನಿಷೇಧಿಸಲು ಮುಂದಾಗಿದ್ದಾರೆ. ಬೆಳಗ್ಗೆ 8:15 ರ ನಂತರ ಶಾಲೆಗಳ ಸಮೀಪವೇ ವಿದ್ಯಾರ್ಥಿಗಳನ್ನು ಇಳಿಸಿ ಮತ್ತು ಅಲ್ಲೇ ನಿಲುಗಡೆ ಮಾಡುವ ಶಾಲಾ ಬಸ್‌ಗಳಿಗೆ ದಂಡ ವಿಧಿಸಲು ಅವರು ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ. ಬೆಳಗ್ಗೆ 8:30 ರ ನಂತರ ಶಾಲಾ ವಾಹನಗಳನ್ನು ಶಾಲೆಗಳ ಬಳಿ ನಿಲ್ಲಿಸಲು ಅನುಮತಿ ಇಲ್ಲ. ಹಾಗೇನಾದರೂ ನಿಲ್ಲಿಸಿದರೆ ದಂಡ ಪಾವತಿಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಗತಿಗಳನ್ನು ಬೇಗ ಆರಂಭಿಸುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಹೋಗುವುದನ್ನು ಖಚಿತಪಡಿಸಿಕೊಳ್ಳಲು ಸಂಚಾರ ಪೊಲೀಸ್ ಇಲಾಖೆಯು “ಮೀಸಲಾದ ಕ್ಯಾರೇಜ್‌ವೇ” ಮತ್ತು “ಸುರಕ್ಷಿತ ಮಾರ್ಗ”ವನ್ನು ಜಾರಿಗೊಳಿಸಲಿದೆ. ಮಕ್ಕಳನ್ನು ಶಾಲೆಗೆ ಪಿಕ್ ಮತ್ತು ಡ್ರಾಪ್ ಮಾಡಲು ಪೋಷಕರಿಗೆ ಪ್ರವೇಶ ಮತ್ತು ನಿರ್ಗಮನವನ್ನು ಸಹ ನಿಯೋಜಿಸಲಾಗುವುದು. ಆ ನಿಗದಿ ಪಡಿಸಿದ ಜಾಗದಿಂದಲೇ ಪೋಷಕರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವುದು, ಬರುವುದು ಮಾಡಬಹುದು. ಪೋಷಕರಿಗೆ ನೀಡಲಾದ ಎಂಟ್ರಿ ಪಾಯಿಟ್‌ನಿಂದ ವಾಹನ ಚಲಾಯಿಸಿ ಮಕ್ಕಳನ್ನು ಆಟದ ಮೈದಾನದಲ್ಲಿ ಬಿಟ್ಟು ಮತ್ತೆ ಎಗ್ಸಿಟ್(ಹೊರ ಹೋಗುವ) ಪಾಯಿಂಟ್‌ಗೆ ಹಿಂತಿರುಗಬೇಕು. ಇದರಿಂದ ರಸ್ತೆಯಲ್ಲಿ ಪೋಷಕರ ವಾಹನಗಳು ನಿಂತು ಟ್ರಾಫಿಕ್ ಉಂಟಾಗುತ್ತಿದ್ದ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ.
ಶಾಲಾಗಳು ಬಸ್ ಮತ್ತು ವ್ಯಾನ್‌ಗಳನ್ನು ತಮ್ಮ ಮೈದಾನದಲ್ಲಿ ನಿಲ್ಲಿಸುವಂತೆ ಸಂಚಾರ ಪೊಲೀಸರು ಕಟ್ಟುನಿಟ್ಟಾಗಿ ಸೂಚನೆಗಳನ್ನು ನೀಡಿದ್ದಾರೆ.

ಪ್ರಮುಖ ಸುದ್ದಿ :-   ತದಡಿ ಬಂದರಿನಲ್ಲಿ ದುರಂತ: ಬೋಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ಸಾವು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement