ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದರ ಬೆಳಗಾವಿ ಗಡಿ ಪ್ರವೇಶಕ್ಕೆ ನಿರ್ಬಂಧ: ಬೆಳಗಾವಿ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಮಂಗಳವಾರ (ಡಿಸೆಂಬರ್‌ 6) ಬೆಳಗಾವಿಗೆ ಆಗಮಿಸುವ ಮಹಾರಾಷ್ಟ್ರದ ಇಬ್ಬರು ಸಚಿವರು ಹಾಗೂ ಓರ್ವ ಸಂಸದರಿಗೆ ರಾಜ್ಯ ಪ್ರವೇಶ ನಿರ್ಬಂಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್‌ ಪಾಟೀಲ್‌, ಶಂಭುರಾಜ್‌ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಸಿಆರ್‌ಪಿಸಿ 1973 ಕಲಂ. 144 (3) ರನ್ವಯ ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಡಿಸೆಂಬರ್‌ 6ರಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಮಹಾರಾಷ್ಟ್ರದ ಈ ನಾಯಕರ ಭೇಟಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಭಾಷಾ ವೈಷಮ್ಯ ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ, ಸಾರ್ವಜನಿಕ ಆಸ್ತಪಾಸ್ತಿಗಳಿಗೆ ಹಾನಿ ಉಂಟಾಗುವ ಸಾಧ್ಯತೆ ಇರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಅವರನ್ನು ನಿರ್ಬಂಧಿಸಲಾಗಿದೆ.
ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement