ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದ್ದು, ಗಡಿ ತಗಾದೆ ಮಾಡುತ್ತಿರುವ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ.
ಮಹಾರಾಷ್ಟ್ರ ಗಡಿ ತಂಟೆ ತೆಗೆದ ಹಿನ್ನಲೆ ಕರ್ನಾಟಕ ರಕ್ಷಣಾ ವೇದಿಕೆ ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಬೆಳಗಾವಿ ಚಲೋ ಹಮ್ಮಿಕೊಂಡಿತ್ತು. ಈ ಹಿನ್ನೆಲೆ ಬೆಳಗಾವಿ ಕಡೆ ಬರುತ್ತಿದ್ದ ಕರವೇ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ತಡೆದಿದ್ದರು. ನ=ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಮುಂದೆ ಹೋಗಲು ಅವಕಾಶ ನೀಡಲಿಲ್ಲ. ಈ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು
ಕನ್ನಡಿಗರ ಹೋರಾಟವನ್ನು ಸರ್ಕಾರ ಪೊಲೀಸರ ಮೂಲಕ ತಡೆಯುತ್ತಿದೆ. ಬೆಳಗಾವಿ ನಗರದ ಪ್ರವೇಶಕ್ಕೆ ಅವಕಾಶ ಕೊಡುವಂತೆ ಕರವೇ ಕಾರ್ಯಕರ್ತರು ಪಟ್ಟು ಹಿಡಿದರು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಪ್ರಾಣ ಬಿಟ್ಟೇವು ಆದರೆ ಬೆಳಗಾವಿ ಬಿಡೆವು ಎಂದು ಘೋಷಣೆ ಕೂಗಿದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಈ ವೇಳೆ ಮಹಾರಾಷ್ಟ್ರದ ನೋಂದಣಿಯ ಲಾರಿಗಳ ಗಾಜು ಒಡೆದು ಆಕ್ರೋಶ ಹೊರಹಾಕಿದರು. ಮಹಾರಾಷ್ಟ್ರ ನೊಂದಣಿ ಇರುವ ಲಾರಿಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಪುಣೆಯಿಂದ ಬೆಂಗಳೂರಿನತ್ತ ಹೊರಟಿದ್ದ ಮಹಾರಾಷ್ಟ್ರ ನೋಂದಣಿ ಇರುವ ಲಾರಿಗಳ ಮೇಲೆ ಏರಿ ಪ್ರತಿಭಟನೆ ನಡೆಸಿದರು. ಕಲ್ಲು ತೂರಾಟ ನಡೆಸಿದರು.
ಹೀಗಾಗಿ ಕೂಡಲೇ ಹೋರಾಟಗಾರರನ್ನು ಸ್ಥಳದಿಂದ ಚದುರಿಸಿ ಪೊಲೀಸರು ಲಾರಿಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕರವೇ ಕಾರ್ಯಕರ್ತರ ಪ್ರತಿಭಟನೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲೂ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪುಣೆ ಬಸ್ ನಿಲ್ದಾಣದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿದ್ದಾರೆ. ನಿಪ್ಪಾಣಿ ಬಳಿ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸಲು ಶಿವಸೇನೆ ಕಾರ್ಯಕರ್ತರು ಪ್ರಯತ್ನಿಸಿದ್ದಾರೆ. ಇದರಿಂದ ಎರಡು ರಾಜ್ಯಗಳ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮಂಗಳವಾರ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದರು. ಆದರೆ, ಸುರಕ್ಷತೆ, ಕಾನೂನು ಪಾಲನೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಅವರ ಪ್ರವೇಶವನ್ನು ನಿರ್ಬಂಧಿಸಿದ್ದರಿಂದ ಮಹಾರಾಷ್ಟ್ರ ಸಚಿವರ ಪ್ರವಾಸ ರದ್ದಾಗಿತ್ತು.
ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ ಈಗ ಸುಪ್ರೀಂ ಕೋರ್ಟ್‌ನಲ್ಲಿದ್ದು, ಅಂತಿಮ ವಿಚಾರಣೆ ನಡೆಯುತ್ತಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ