ಪಿಜಿಸಿಐಎಲ್‌ನಲ್ಲಿ 800 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು PGCIL ನ ಅಧಿಕೃತ ವೆಬ್‌ಸೈಟ್ http://powergrid.in ಗೆ ಭೇಟಿ ನೀಡುವ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 11ಕೊನೆಯ ದಿನವಾಗಿದೆ. ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳ ಸಂಖ್ಯೆ- 800
ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಿಕಲ್)- 50 ಹುದ್ದೆಗಳು
ಫೀಲ್ಡ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್)- 15 ಹುದ್ದೆಗಳು
ಫೀಲ್ಡ್ ಇಂಜಿನಿಯರ್ (ಐಟಿ)- 15 ಹುದ್ದೆಗಳು
ಫೀಲ್ಡ್ ಸೂಪರ್‌ವೈಸರ್ (ಎಲೆಕ್ಟ್ರಿಕಲ್)- 480 ಹುದ್ದೆಗಳು
ಫೀಲ್ಡ್ ಸೂಪರ್‌ವೈಸರ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್)- 240 ಹುದ್ದೆಗಳು
ವೇತನ:
ಫೀಲ್ಡ್ ಇಂಜಿನಿಯರ್ – 30,000-1,20,000 ರೂ.ಗಳು
ಫೀಲ್ಡ್ ಸೂಪರ್‌ವೈಸರ್-23,000-1,05,000 ರೂ.ಗಳು

ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದಾರೂ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಐಟಿ ಸಂಬಂಧಿತ ವಿಷಯದಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಅವರಿಗೆ 1 ವರ್ಷದ ಅನುಭವ ಇರಬೇಕು.
ವಯೋಮಿತಿ: ಈ ಹುದ್ದೆಗಳಿಗೆ 29 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ ಹಾಗೂ ಇತರರಿಗೆ ಸರ್ಕಾರದ ನಿಯಮದಂತೆ ವಯೋಮಿತಿ ಸಡಿಲತೆ ಹಾಗೂ ಇತರ ಮಾನದಂಡಗಳಲ್ಲಿ ಸಡಿಲತೆ ಇರುತ್ತದೆ.
ಅರ್ಜಿ ಶುಲ್ಕ: ಫೀಲ್ಡ್ ಇಂಜಿನಿಯರ್ –400 ರೂ. ಹಾಗೂ ಫೀಲ್ಡ್ ಸೂಪರ್‌ವೈಸರ್- 300 ರೂ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ -ಮಾಡಿ PGCIL-Recruitment-2022-Notification-PDF
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 11, 2022

ಪ್ರಮುಖ ಸುದ್ದಿ :-   ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement