ಮತದಾರರ ಪಟ್ಟಿ ಪರಿಷ್ಕರಣೆ, ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಧಾರವಾಡ: ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ -74 ರ ವ್ಯಾಪ್ತಿಯ ಧಾರವಾಡದ ಮತಗಟ್ಟೆ ಸಂಖ್ಯೆ 105 ರ ಮತಗಟ್ಟೆ ಮಟ್ಟದ ಅಧಿಕಾರಿ ಸಚಿನ್ ನಾಯ್ಕ ಅವರನ್ನು ಅಮಾನತು ಮಾಡಲಾಗಿದೆ.
ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಸೇವೆಯಿಂದ ಅಮಾನತು ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಸಚಿನ್ ನಾಯ್ಕ ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿರುವುದರಿಂದ ಅವರನ್ನು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಸಲಾಗಿದೆ ಎಂದು ತಿಳಿಸಿದ್ದಾರೆ.
ಸಚಿನ್ ನಾಯ್ಕ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಠರಣೆ, ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರಿದ್ದು, ಮತದಾರರ ಪಟ್ಟಿಯ ನೋಂದಣಿಯ ವಿಶೇಷ ಅಭಿಯಾನದಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗದೇ ಗೈರು ಹಾಜರಾಗಿ ದೂರವಾಣಿಯಲ್ಲಿ ಸುಳ್ಳು ಸಬೂಬುಗಳನ್ನು ಹೇಳಿದ್ದಾರೆ. ಮತಗಟ್ಟೆ ಮಟ್ಟದ ಅಧಿಕಾರಿಯ ಕೆಲಸ ನಿರ್ವಹಿಸದೇ ಬೇಜವಾಬ್ದಾರಿಯಿಂದ ವರ್ತಿಸಿ ಕರ್ತವ್ಯಲೋಪ ಎಸಗಿದ್ದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇವರ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆ 1950ರನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಡಿ.ಕೆ. ಶಿವಕುಮಾರ ವಿರುದ್ಧ ಎಫ್ ಐಆರ್ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement