ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಿಎಂಗೆ ಎಚ್ಚರಿಕೆ ನೀಡಿದ ಶರದ್ ಪವಾರ್

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯಿಂದ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳಲ್ಲಿ “ಭಯದ ವಾತಾವರಣ” ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ಮಂಗಳವಾರ ಮುಂಬೈನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲಿನ ದಾಳಿಯನ್ನು ಉಲ್ಲೇಖಿಸಿ ಬೊಮ್ಮಾಯಿ ಅವರನ್ನು ದೂಷಿಸಿದ ಪವಾರ್, ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ತುರ್ತು ಮತ್ತು ಸೌಹಾರ್ದಯುತವಾಗಿ ಪರಿಹರಿಸಬೇಕೆಂದು ಒತ್ತಾಯಿಸಿದರು.
ಮಹಾರಾಷ್ಟ್ರದ ಗಡಿಭಾಗದ ಹೆಚ್ಚಿನ ಹಳ್ಳಿಗಳ ಮೇಲೆ ಹಕ್ಕು ಸಾಧಿಸುವ ಬೊಮ್ಮಾಯಿ ಅವರ ಹೇಳಿಕೆಗಳನ್ನು ಖಂಡಿಸಿದರು.. ವರದಿಗಳ ಪ್ರಕಾರ, ಕರ್ನಾಟಕ ರಕ್ಷಣಾ ವೇದಿಕೆಯ ಕೆಲವು ಕಾರ್ಯಕರ್ತರು ಬೆಳಗಾವಿಯ ಟೋಲ್ ಪೋಸ್ಟ್ ಬಳಿ ಮಹಾರಾಷ್ಟ್ರಕ್ಕೆ ಬರುತ್ತಿದ್ದ ಕೆಲವು ಟ್ರಕ್‌ಗಳು ಮತ್ತು ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಇದಕ್ಕೆ ಪ್ರತೀಕಾರವಾಗಿ, ಶಿವಸೇನೆಯ (ಯುಬಿಟಿ) ಬೆಂಬಲಿಗರು ಕರ್ನಾಟಕದ ಬಸ್‌ಗಳಿಗೆ ಕಪ್ಪು ಮತ್ತು ಕೇಸರಿ ಬಣ್ಣವನ್ನು ಬಳಿದರು ಮತ್ತು ಕಾರ್ಯಕರ್ತರ ಗುಂಪು ಮರಾಠಿ ಮಾತನಾಡುವ ಜನಸಂಖ್ಯೆ ಇರುವ ಗಡಿ ಪ್ರದೇಶಗಳಿಗೆ ಶೀಘ್ರವೇ ಹೋಗುವುದಾಗಿ ಹೇಳಿದರು. ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಗಡುವು ನೀಡಿದ ಪವಾರ್, 48 ಗಂಟೆಗಳಲ್ಲಿ ಗೊಂದಲದ ಪರಿಸ್ಥಿತಿಯನ್ನು ಹತೋಟಿಗೆ ತರದಿದ್ದರೆ, ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕಾಗುತ್ತದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

“ಮಹಾರಾಷ್ಟ್ರ ಇಷ್ಟು ದಿನ ಸಂಯಮ ಕಾಯ್ದುಕೊಂಡಿದೆ, ಆದರೆ ಜನರು ಸುಮ್ಮನಿರುವುದಿಲ್ಲ… 48 ಗಂಟೆಗಳಲ್ಲಿ ಈ ದಾಳಿಗಳು ನಿಲ್ಲದಿದ್ದರೆ, ನಾವು ಬೇರೆ ನಿಲುವು ತೆಗೆದುಕೊಳ್ಳಬೇಕಾಗುತ್ತದೆ. ಆಗ ಅದರ ಪರಿಣಾಮಗಳಿಗೆ ಕರ್ನಾಟಕದ ಮುಖ್ಯಮಂತ್ರಿಗಳೇ ಹೊಣೆಯಾಗುತ್ತಾರೆ ಎಂದು ಪವಾರ್ ಹೇಳಿದರು.
ಕರ್ನಾಟಕದ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಬ್ಬರೂ ಕುಳಿತು ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಸರಿಯಾದ ಸಮನ್ವಯದಿಂದ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು. ಮಂಗಳವಾರ ಬೆಳಗಾವಿಯಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿದ ಪವಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಉದ್ದೇಶಿಸಿರುವ ಮಹಾರಾಷ್ಟ್ರ ಸಂಸದರು ಯಾರಾದರೂ ಕಾನೂನನ್ನು ಕೈಗೆತ್ತಿಕೊಳ್ಳಲು ಪ್ರಯತ್ನಿಸಿದರೆ ಕೇಂದ್ರ ಸರ್ಕಾರವನ್ನು ದೂಷಿಸಬೇಕಾಗುತ್ತದೆ ಎಂದು ಶಾ ಅವರಿಗೆ ತಿಳಿಸುವಂತೆ ಒತ್ತಾಯಿಸಿದರು.

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement