ಖರ್ಗೆ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಎಂಎಲ್‌ಸಿ ವಿಶ್ವನಾಥ: ಚರ್ಚೆಗೆ ಗ್ರಾಸವಾದ ಈ ನಡೆ

ಬೆಂಗಳೂರು: ವಿಧಾನಸಭೆ ಚುನಾವಣೆ ಬರುತ್ತಿದ್ದಂತೆ ಕೆಲವು ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಎರಡು ದಿನಗಳ ಇಬ್ಬರು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.
ದೆಹಲಿಯಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಇಂದು, ಮಂಗಳವಾರ ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಚುನಾವಣಾ ಹೊಸ್ತಿಲಲ್ಲಿ ವಿಶ್ವನಾಥ ಅವರು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು ಏಕೆ ಎಂಬ ಪ್ರಶ್ನೆ ಮೂಡಿದ್ದು, ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕಳೆದ 3 ವರ್ಷಗಳಿಂದ ಬಿಜೆಪಿಯಲ್ಲಿರುವ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಈಗ ಮರಳಿ ಕಾಂಗ್ರೆಸ್‌ ಸೇರುವ ಪೂರ್ವಭಾವಿಯಾಗಿ ಈ ಭೇಟಿಗಳು ನಡೆಯುತ್ತಿವೆಯೇ ಎಂಬ ಜಿಜ್ಞಾಸೆಗೂ ಕಾರಣವಾಗಿದೆ. ಯಾಕೆಂದರೆ ಸೋಮವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬೆನ್ನಿಗೇ ಇಂದು ಮಂಗಳವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಈ ಉಹಾಪೋಹಕ್ಕೆ ಮತ್ತಷ್ಟು ವಗ್ಗರಣೆ ಸೇರಿಸಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement