ಕುಮಟಾ: ನಿವೃತ್ತ ತಹಶೀಲ್ದಾರ ಮೇಘರಾಜ ನಾಯ್ಕ ನಿಧನ

ಕುಮಟಾ: ನಗರದ ಪೋಸ್ಟಲ್ ಕಾಲೋನಿ ಸಮೀಪದ ನಿವಾಸಿ ನಿವೃತ್ತ ತಹಸೀಲ್ದಾರ ಮೇಘರಾಜ್ ನಾಯ್ಕ್ (62) ಗುರುವಾರ ಮುಂಜಾನೆ ನಿಧನರಾದರು.
ಅವರು ಕುಮಟಾದಲ್ಲಿ ತಹಸೀಲ್ದಾರ ಆಗಿದ್ದಾಗ ನೆರೆ ಹಾವಳಿ ಹಾಗೂ ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಪರಿಸ್ಥಿತಿಯ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿದ್ದರು.
ಮೂಲತಃ ಕುಮಟಾ ತಾಲೂಕಿನ ಕಾಗಾಲ ಗ್ರಾಮದವರಾಗಿದ್ದ ಮೇಘರಾಜ ನಾಯ್ಕ ಅವರು ವಿಧಾನ ಸೌಧ, ವಿಜಯಪುರ ಜಿಲ್ಲೆಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದರು. ಕುಮಟಾ ಪುರಸಭೆ ಮುಖ್ಯಧಿಕಾರಿಯಾಗಿಯೂ ಕೆಲಸ ಮಾಡಿದ್ದರು.
ನಿವೃತ್ತಿ ನಂತರ ಕೊರೊನಾ ಕಾಯಿಲೆಗೆ ತುತ್ತಾಗಿ ನಂತರ ಗುಣಮುಖರಾಗಿದ್ದರು. ಇತ್ತೀಚಿಗೆ ಆರೋಗ್ಯದಲ್ಲಿ ಪುನಃ ತೊಂದರೆ ಉಂಟಾಗಿ ಬೆಂಗಳೂರು ಆಸ್ಪತ್ರೆಯಲ್ಲಿ ಪಡೆಯುತ್ತಿದ್ದರು. ಬುಧವಾರ ಮುಂಜಾನೆ ಅವರಿಗೆ ಹೃದಯದ ತೊಂದರೆ ಕಾಣಿಸಿಕೊಂಡಿದ್ದು, ನಂತರ ಅವರನ್ನು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.
ತಹಸೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ ವಿವೇಕ್ ಶೇಣ್ವಿ ಅವರು ಸಂತಾಪ ಸಭೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement