ಮಂಡೌಸ್ ಚಂಡಮಾರುತ : ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ ‘ಮಂಡೌಸ್’ ಚಂಡಮಾರುತದ ಪರಿಣಾಮಗಳು ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಲ್ಲೂ ಕಂಡುಬರುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳನ್ನು ಒಳಗೊಂಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ ಡಿಸೆಂಬರ್‌ 12ರ ವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿಸೆಂಬರ್ 11 ಮತ್ತು 12 ರಂದು ಗುಡುಗು ಮತ್ತು ಮಿಂಚುಗಳಿಂದ ಕೂಡಿದ ಮಳೆಯಾಗಬಹುದು ಎಂದು ಐಎಂಡಿ (IMD) ಮುನ್ಸೂಚನೆ ನೀಡಿದೆ.
ಹವಾಮಾನ ಬ್ಲಾಗರ್‌ಗಳ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಕಂಡುಬಂದ ಮಾಂಡೌಸ್ ಚಂಡಮಾರುತದ ದುರ್ಬಲವಾದ ಪರಿಚಲನೆಯು ದಕ್ಷಿಣ ಕರ್ನಾಟಕವನ್ನು ದಾಟುವ ನಿರೀಕ್ಷೆಯಿದೆ. ಮಾಂಡೌಸ್ ಚಂಡಮಾರುತ ಡಿಸೆಂಬರ್‌ 9ರಂದು ಸಂಜೆ ಉತ್ತರ ತಮಿಳುನಾಡು ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಈ ಚಂಡಮಾರುತದ ದುರ್ಬಲ ಪರಿಚಲನೆಯು ದಕ್ಷಿಣ ಕರ್ನಾಟಕವನ್ನು ದಾಟುವ ನಿರೀಕ್ಷೆಯಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ಮಂಡೌಸ್‌ ಚಂಡಮಾರುತ ಡಿಸೆಂಬರ್ 9ರ ಮಧ್ಯರಾತ್ರಿ ನೆರೆಯ ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾ ನಡುವೆ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ಮುಂದಿನ ಕೆಲವು ದಿನಗಳವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಉತ್ತಮವಾಗಿ ಗುರುತಿಸಲ್ಪಟ್ಟಿರುವ ಕಡಿಮೆ ಒತ್ತಡದ ಪ್ರದೇಶವು ಡಿಸೆಂಬರ್ 6 ರಂದು ರೂಪುಗೊಂಡಿತು. ಅದು ಬುಧವಾರದ ವೇಳೆಗೆ ಚೆನ್ನೈನಿಂದ ಸುಮಾರು 750 ಕಿಮೀ ದೂರದಲ್ಲಿತ್ತು.

ಐಎಂಡಿಯು ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತವು ಕಾರೈಕಲ್‌ನ ಪೂರ್ವ ಮತ್ತು ಆಗ್ನೇಯದಿಂದ ಸುಮಾರು 500 ಕಿಮೀ ದೂರದಲ್ಲಿದೆ ಎಂದು ಹೇಳಿದೆ. ಇದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಪಕ್ಕದ ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವಿನ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಡಿಸೆಂಬರ್ 9 ರ ಮಧ್ಯರಾತ್ರಿ ದಾಟುವ ನಿರೀಕ್ಷೆಯಿದೆ ಎಂದು ಹೇಳಿದೆ. ಗಾಳಿಯು ಗಂಟೆಗೆ 70 ಕಿಮೀ ವೇಗದಲ್ಲಿ ಬೀಸುವ ನಿರೀಕ್ಷೆಯಿದೆ” ಎಂದು ಐಎಂಡಿ ತಿಳಿಸಿದೆ. ಪುದುಚೇರಿಯು ಚೆನ್ನೈನಿಂದ ಸುಮಾರು 160 ಕಿ.ಮೀ. ದೂರಲ್ಲಿದೆ. ಹೀಗಾಗಿ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement