ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸಿ ಚುನಾವಣೆ ಬಹಿಷ್ಕರಿಸಿದ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯ ಗ್ರಾಮಸ್ಥರು

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಹಸಿಲ್‌ನ ಹಳ್ಳಿಯೊಂದರ ನಿವಾಸಿಗಳು ಸ್ಥಳೀಯ ಮಟ್ಟದಲ್ಲಿ ಮೂಲ ಸೌಕರ್ಯಗಳ ಕೊರತೆ ಆರೋಪಿಸಿ ತಮ್ಮ ಗ್ರಾಮವನ್ನು ಕರ್ನಾಟಕಕ್ಕೆ ವಿಲೀನಗೊಳಿಸುವಂತೆ ಒತ್ತಾಯಿಸಿದ್ದಾರೆ.
1,200 ಜನಸಂಖ್ಯೆಯನ್ನು ಹೊಂದಿರುವ ಬೊಂಬಾಲಿ ಬುದ್ರುಕ್ ಗ್ರಾಮದಲ್ಲಿ ವಾಸಿಸುವ ಜನರು ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ದಶಕಗಳ ಗಡಿ ವಿವಾದ ಮತ್ತೊಮ್ಮೆ ಭುಗಿಲೆದ್ದಿರುವಾಗಲೇ ಅವರ ವಿಲೀನದ ಬೇಡಿಕೆ ಬಂದಿದೆ. ಎರಡೂ ರಾಜ್ಯಗಳು ಪರಸ್ಪರರ ನಿಯಂತ್ರಣದಲ್ಲಿರುವ ಕೆಲವು ಗಡಿ ಪ್ರದೇಶಗಳ ಮೇಲೆ ಹಕ್ಕು ಸಾಧಿಸುತ್ತವೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಜತ್‌ ತಾಲೂಕು ಮತ್ತು ಅಕ್ಕಲಕೋಟ ತಹಸಿಲ್ ಮತ್ತು ಸೊಲ್ಲಾಪುರದ ಕೆಲವು “ಕನ್ನಡ ಮಾತನಾಡುವ” ಪ್ರದೇಶಗಳ ಮೇಲೆ ತಮ್ಮ ಹಕ್ಕು ಸಾಧಿಸಿದ್ದರು.

ಕರ್ನಾಟಕದಿಂದ ಕೇವಲ 500 ಮೀಟರ್ ದೂರದಲ್ಲಿರುವ ಬೊಂಬಾಲಿ ಬುದ್ರುಕ್ ಗ್ರಾಮ ಪಂಚಾಯಿತಿಯಾಗಿದೆ. ಕಳೆದ ಹಲವು ವರ್ಷಗಳಿಂದ ಮೂಲ ಸೌಕರ್ಯ ಕಲ್ಪಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ ಮತ್ತು ಗ್ರಾಮದಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ. ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ತಾರತಮ್ಯ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರವು ರೈತರು ಮತ್ತು ಬಡವರಿಗಾಗಿ ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದ್ದರಿಂದ ನಾವು ಕರ್ನಾಟಕಕ್ಕೆ ಸೇರುವ ಎಚ್ಚರಿಕೆ ನೀಡಿದ್ದೇವೆ ಎಂದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಸಿದ್ಧಲಿಂಗ ಕಾನಡೆ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಡಿಸೆಂಬರ್ 18 ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಸ್ಥಳೀಯ ನಿವಾಸಿಗಳು ಘೋಷಿಸಿದ್ದಾರೆ. ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಿ ಕರ್ನಾಟಕಕ್ಕೆ ಸೇರಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಉತ್ತಮ ಶಾಲೆಗಳು, ಸ್ಥಳೀಯ ಆರೋಗ್ಯ ಕೇಂದ್ರಗಳಲ್ಲಿ ಕಾಯಂ ವೈದ್ಯಾಧಿಕಾರಿಗಳ ನೇಮಕ, ಕೃಷಿಗೆ 10 ಎಚ್‌ಪಿ ವರೆಗೆ ಉಚಿತ ವಿದ್ಯುತ್ ಸೇರಿದಂತೆ ತಮ್ಮ ಬೇಡಿಕೆಗಳನ್ನು ಪಟ್ಟಿ ಮಾಡಿ ಆಡಳಿತಕ್ಕೆ ಮನವಿ ಸಲ್ಲಿಸಿದರು ಎಂದು ಕಾನಡೆ ಹೇಳಿದರು.

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement