ಗುಜರಾತಿನಲ್ಲಿ ಕಾಂಗ್ರೆಸ್ ಧೂಳೀಪಟ: ವಿಪಕ್ಷ ನಾಯಕನ ಸ್ಥಾನ ಸಿಗುವುದೂ ಡೌಟು..!

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಭೀತಿ ಎದರಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
182 ಸದಸ್ಯ ಸಂಖ್ಯೆಯ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ಗೆ ಒಟ್ಟು ವಿಧಾನಸಭೆ ಬಲದ ಕನಿಷ್ಠ ಶೇ.10ರಷ್ಟು ಶಾಸಕರು (ಕನಿಷ್ಠ 18) ಗೆಲ್ಲಬೇಕಾಕಿತ್ತು. ಆದರೆ ಕಾಂಗ್ರೆಸ್ ಕೇವಲ 16 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನ ಕೈತಪ್ಪುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

2017ರಲ್ಲಿ ಬಿಜೆಪಿ ಒಟ್ಟು 99 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಪಡೆದಿತ್ತು. ಆಗ ಪ್ರಬಲ ಪೈಪೋಟಿ ನೀಡಿದ್ದ ಕಾಂಗ್ರೆಸ್ 77 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ 2022ರ ಚುನಾವಣೆಯಲ್ಲಿ ಕಾಂಗ್ರೆಸ್‌ 77 ಸ್ಥಾನಗಳ ಪೈಕಿ 62 ಕ್ಷೇತ್ರಗಳಲ್ಲಿ ಸೋತು ಕೇವಲ 16 ಸ್ಥಾನಗಳನ್ನು ಉಳಿಸಿಕೊಳ್ಳಲಷ್ಟೇ ಶಕ್ತವಾಗಿದೆ.
2014, 2019ರ ಚುನಾವಣಾ ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ವಿಪಕ್ಷ ನಾಯಕನ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಕಾಂಗ್ರೆಸ್ 2014ರಲ್ಲಿ ಕೇವಲ 44 ಸ್ಥಾನ ಗಳಿಸಿದ್ದು, 2019ರಲ್ಲಿ 52 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement