ಬೆಂಗಳೂರು : ಗುಜರಾತ್ ಚುನಾವಣೆಯಲ್ಲಿ ಬಿಜೆಪಿ (BJP) ಅಭೂತಪೂರ್ವ ಗೆಲುವಿನತ್ತ ದಾಪುಗಾಲು ಹಾಕಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆಯೂ ಸಕಾರಾತ್ಮಕ ಪರಿಣಾಮ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ. ಅಲ್ಲಿ ಬಿಜೆಪಿ ಸತತ 7ನೇ ಬಾರಿಗೆ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧಿ ಟ್ರೆಂಡ್ ಇತ್ತು. ಆದರೆ ಗುಜರಾತಿನಲ್ಲಿ ಆಡಳಿತದ ಪರವಾಗಿದೆ ಎಂಬುದನ್ನು ಫಲಿತಾಂಶ ನಿರೂಪಿಸಿದೆ ಎಂದು ಹೇಳಿದ್ದಾರೆ.
ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಲಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ