ಖಾಸಗಿ ಸದಸ್ಯರ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆ ರಾಜ್ಯಸಭೆಯಲ್ಲಿ ಮಂಡನೆ

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆ ಬಿಜೆಪಿಯ ರಾಜಸ್ಥಾನದ ಸಂಸದ ಕಿರೋಡಿ ಲಾಲ್ ಮೀನಾ ಅವರು ಖಾಸಗಿ ಸದಸ್ಯ ವಿಧೇಯಕವಾಗಿ ಏಕರೂಪ ನಾಗರಿಕ ಸಂಹಿತೆ -2020 ಮಸೂದೆಯನ್ನು ಇಂದು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಇದು ಧರ್ಮ ಆಧಾರಿತ ವೈಯಕ್ತಿಕ ಕಾನೂನುಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಚರ್ಚಿಸಲು ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ಅವರು ರಾಜ್ಯಸಭೆಯಲ್ಲಿ ಶೂನ್ಯವೇಳೆ ನೋಟಿಸ್ ನೀಡಿದರು. ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಅವರು ವಿಧೇಯಕವನ್ನು ಮಂಡಿಸಿದರು. ಆದಾಗ್ಯೂ, ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೃಣಮೂಲ ಕಾಂಗ್ರೆಸ್‌ನ ವಿರೋಧ ಪಕ್ಷದ ಸದಸ್ಯರು ಮಸೂದೆಯನ್ನು ಮಂಡಿಸುವುದರ ವಿರುದ್ಧ ಪ್ರತಿಭಟಿಸಿದರು, ಇದು ದೇಶದಲ್ಲಿ ಪ್ರಚಲಿತದಲ್ಲಿರುವ ಸಾಮಾಜಿಕ ರಚನೆ ಮತ್ತು ವಿವಿಧತೆಯಲ್ಲಿ ಏಕತೆಯನ್ನು “ನಾಶಗೊಳಿಸುತ್ತದೆ” ಎಂದು ವಾದಿಸಿದರು.
ಪ್ರತಿಪಕ್ಷಗಳ ಸದಸ್ಯರು ಮಸೂದೆಯನ್ನು ಹಿಂಪಡೆಯಲು ಕೋರಿದಾಗ, ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಖರ್ ಅವರು ಮತ ವಿಭಜನೆಗೆ ಹಾಕಿದರು ಮತ್ತು ಮಸೂದೆಯನ್ನು ಮಂಡಿಸುವ ಪ್ರಸ್ತಾವನೆಯ ಪರವಾಗಿ 63 ಮತ್ತು ವಿರುದ್ಧವಾಗಿ 23 ಮತಗಳೊಂದಿಗೆ ಅಂಗೀಕರಿಸಲ್ಪಟ್ಟಿತು.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಇದಕ್ಕೂ ಮೊದಲು ಹಲವಾರು ಪಕ್ಷಗಳ ತೀವ್ರ ವಿರೋಧದ ನಂತರ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸಂವಿಧಾನದ ನಿರ್ದೇಶನ ತತ್ವಗಳ ಅಡಿಯಲ್ಲಿ ಸಮಸ್ಯೆಯನ್ನು ಎತ್ತುವುದು ಸದಸ್ಯರ ಕಾನೂನುಬದ್ಧ ಹಕ್ಕು ಎಂದು ವಾದಿಸಿದರು. ಸದನದಲ್ಲಿ ಈ ವಿಷಯ ಚರ್ಚೆಯಾಗಲಿ…ಈ ಹಂತದಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವುದು, ಮಸೂದೆಯನ್ನು ಟೀಕಿಸಲು ಪ್ರಯತ್ನಿಸುವುದು ಅನಪೇಕ್ಷಿತವಾಗಿದೆ ಎಂದು ಅವರು ಹೇಳಿದರು.
ಈ ಹಿಂದೆ, ಮಸೂದೆಯನ್ನು ಪರಿಚಯಿಸಲು ಪಟ್ಟಿ ಮಾಡಲಾಗಿದ್ದರೂ, ಅದನ್ನು ಮೇಲ್ಮನೆಯಲ್ಲಿ ಮಂಡಿಸಲಾಗಿರಲಿಲ್ಲ.
ಧರ್ಮ ಹಾಗೂ ಲಿಂಗದ ದೃಷ್ಟಿಕೋನವನ್ನು ಪರಿಗಣಿಸದೆ ಎಲ್ಲಾ ನಾಗರಿಕರ ವೈಯಕ್ತಿಕ ಹಕ್ಕುಗಳನ್ನು ರಕ್ಷಿಸಲು ಏಕ ರೂಪದ ಕಾನೂನುಗಳನ್ನು ಜಾರಿಗೆ ತರಲು ಮಸೂದೆ ಅವಕಾಶ ಕಲ್ಪಿಸುತ್ತದೆ. ಅಂದರೆ, ಏಕರೂಪ ನಾಗರಿಕ ಸಂಹಿತೆಯು ವೈಯಕ್ತಿಕ ಕಾನೂನುಗಳನ್ನು ರದ್ದುಪಡಿಸುವ ಮೂಲಕ ಅವರ ಧರ್ಮ, ಸಮುದಾಯಗಳನ್ನು ಲೆಕ್ಕಿಸದೆ ಮದುವೆ, ದತ್ತು, ಉತ್ತರಾಧಿಕಾರ, ವಿಚ್ಛೇದನದವರೆಗಿನ ವಿಷಯಗಳ ಮೇಲೆ ಸಾಮಾನ್ಯ ಕಾನೂನುಗಳ ನಿಯಮಗಳನ್ನು ಅನುಸರಿಸುತ್ತದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement