ಬಾಂಗ್ಲಾದೇಶ ವಿರುದ್ಧ ಏಕದಿನದ ಪಂದ್ಯ: ಅಬ್ಬರದ ದ್ವಿಶತಕ ಸಿಡಿಸಿದ ಭಾರತದ ಇಶಾನ್‌ ಕಿಶನ್‌

ಬಾಂಗ್ಲಾದೇಶದ ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತದ ಸ್ಫೋಟಕ ಬ್ಯಾಟರ್‌ ಇಶಾನ್ ಕಿಶನ್‌ 131 ಎಸೆತಗಳಲ್ಲಿ 210 ರನ್ ಗಳಿಸಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಏಕದಿನದ ಪಂದ್ಯದಲ್ಲಿ ತನ್ನ ಮೊದಲನೇ ಶತಕವನ್ನೇ ದ್ವಿಶತಕವಾಗಿಸಿದ ಮೊದಲನೇ ಆಟಗಾರ ಎಂಬ ಹೆಗ್ಗಳಿಕೆ ಭಾಜನರಾಗಿದ್ದಾರೆ. ಅಲ್ಲದೆ ಏಕದಿನದ ಪಂದ್ಯದಲ್ಲಿ ದ್ವಿಶಕತಕಗಳಿಸಿದ ಭಾರತದ ನಾಲ್ಕನೇ ಆಟಗಾರನಾಗಿದ್ದಾರೆ.
ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಬೇಗನೆ ಕಳೆದುಕೊಂಡಿತು. ಮೊದಲು ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ಲಿಟ್ಟನ್ ದಾಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಶಿಖರ್‌ ಧವನ್‌ ಬೇಗನೆ ನಿರ್ಗಮಿಸಿದ್ದು ಅವರು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದು ಸರಿ ಎಂಬುದನ್ನು ಸಾಬೀತುಪಡಿಸಿತ್ತು. ಆದರೆ ಭಾರತದ ಕಿಶನ್‌ ಅವರ ಸ್ಪೋಟಕ ಬ್ಯಾಟಿಂಗ್‌ ಅದನ್ನು ಕೆಲವೇ ಕ್ಷಣಗಳಲ್ಲಿ ಹುಸಿ ಮಾಡಿತು. ಇಶಾನ್‌ ಕಿಶನ್‌ ಸ್ಪೋಟಕ ಆಟದಲ್ಲಿ (126 ಎಸೆತಗಳಲ್ಲಿ 200 ರನ್‌) ಬರೊಬ್ಬರಿ 24 ಬೌಂಡರಿ ಹಾಗೂ 10 ಸಿಕ್ಸರ್‌ಗಳಿವೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಭಾರತ ಈ ಪಂದ್ಯಕ್ಕಾಗಿ ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ಅವರನ್ನು ಕಣಕ್ಕಿಳಿಸಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆತಿಥೇಯರು ಈಗಾಗಲೇ 2-0 ಅಂತರದ ಮುನ್ನಡೆ ಸಾಧಿಸಿದ್ದಾರೆ. ಹೆಬ್ಬೆರಳಿನ ಗಾಯದಿಂದಾಗಿ ಭಾರತದ ನಿಯಮಿತ ನಾಯಕ ರೋಹಿತ್ ಶರ್ಮಾ ಅಂತಿಮ ಪಂದ್ಯದಿಂದ ಹೊರಗುಳಿದಿದ್ದು, ಕೆ.ಎಲ್. ರಾಹುಲ್ ಅವರು ತಂಡವನ್ನು ಮುನ್ನಡೆಸುತ್ತಿದ್ದಾರೆ.‌
ಭಾರತ (ಆಡುವ XI): ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (w/c), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement