ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ 7 ರ ವೇಳೆಗೆ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಗಂಡ, ಹೆಂಡತಿ ಹಾಗೂ ಮಗು ಸಹಿತ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರು ನಾಗರಾಜ (40) ಪ್ರತ್ಯುಷಾ (32) ಹಾಗೂ 2 ವರ್ಷದ ಮಗು. ಆಂಧ್ರಪ್ರದೇಶದ ಮೂಲದ ಕುಟುಂಬ ಕಾರಿನಲ್ಲಿ ಧರ್ಮಸ್ಥಳ ಪ್ರವಾಸ ಮುಗಿಸಿ ಶೃಂಗೇರಿ ಕಡೆಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾರ್ಕಳ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ