ಗುಜರಾತ್: ಸಿಎಂ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆಯಾದ ಭೂಪೇಂದ್ರ ಪಟೇಲ್: ಸೋಮವಾರ ಪ್ರಮಾಣ ವಚನ ಸ್ವೀಕಾರ

ಅಹಮದಾಬಾದ್‌: ಗುರುವಾರದ ವಿಧಾನಸಭಾ ಚುನಾವಣಾ ಗೆಲುವಿನ ನಂತರ ರಾಜೀನಾಮೆ ನೀಡಿದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಇಂದು, ಶನಿವಾರ ಬಿಜೆಪಿ ಶಾಸಕರ ಸಭೆಯಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಯಿತು. ಪಟೇಲ್ ಅವರ ಹೆಸರನ್ನು ಕಾನು ದೇಸಾಯಿ ಅವರು ಪ್ರಸ್ತಾಪಿಸಿದರು ಮತ್ತು ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಮುಖ್ಯಮಂತ್ರಿ ಸ್ಥಾನಕ್ಕೆ ನಾಯಕನನ್ನು ಆಯ್ಕೆ ಮಾಡಲು ಗುಜರಾತ್ ಬಿಜೆಪಿ ಇಂದು, ಶನಿವಾರ ಗಾಂಧಿನಗರದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿತು. ಸಭೆಯಲ್ಲಿ ಪಕ್ಷದ ವೀಕ್ಷಕರು ಮತ್ತು ಹಿರಿಯ ನಾಯಕರಾದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಪ್ರಚಂಡ ವಿಜಯದೊಂದಿಗೆ ಹೊಸ ದಾಖಲೆ ಮಾಡಿದೆ.
ರಾಜ್ಯದ 182 ವಿಧಾನಸಭಾ ಸ್ಥಾನಗಳಲ್ಲಿ 156 ಸ್ಥಾನಗಳನ್ನು ಪಡೆದುಕೊಂಡು ಹೊಸ ದಾಖಲೆ ಸೃಷ್ಟಿಸಿದೆ. ಹಿಂದಿನ ದಾಖಲೆ 1985 ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಾಧವ್ ಸಿಂಗ್ ಸೋಲಂಕಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು 149 ಸ್ಥಾನಗಳನ್ನು ಗಳಿಸಿತ್ತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement