ರಾಜ್ಯದ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ದಿಢೀರ್ ಬುಲಾವ್

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕಾರಣವೂ ಚುರುಕು ಪಡೆಯುತ್ತಿದೆ. ಈಗ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಸೋಮವಾರ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ದೆಹಲಿಯಲ್ಲಿ ಪಕ್ಷದ ರಾಜ್ಯ ಹಿರಿಯ ನಾಯಕರ ಸಭೆ ಕರೆದು ಕಾರ್ಯತಂತ್ರದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ, ಪರಿಷತ್‌ ವಿಪಕ್ಷ ನಾಯಕಾರದ ಬಿ.ಕೆ ಹರಿಪ್ರಸಾದ, ಹೆಚ್ ಕೆ ಪಾಟೀಲ, ಡಾ ಜಿ ಪರಮೇಶ್ವರ , ಕಾರ್ಯಾಧ್ಯಕ್ಷರು ಸೇರಿದಂತೆ 14 ಪ್ರಮುಖ ನಾಯಕರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಆಹ್ವಾನಿಸಿದೆ ಎಂದು ಹೇಳಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸುದೀರ್ಘ ಸಭೆ ನಡೆಸಲಿದ್ದಾರೆ. ಖರ್ಗೆ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾ ಹಾಗೂ ಕೆ ಸಿ ವೇಣುಗೋಪಾಲ್ ಸಹ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ತದಡಿ ಬಂದರಿನಲ್ಲಿ ದುರಂತ: ಬೋಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ಸಾವು

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement