ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಾರು ಹತ್ತುವ ಮುನ್ನವೇ ಚಾಲಕನಿಗೆ ಹೃದಯಾಘಾತ, ಸಾವು

posted in: ರಾಜ್ಯ | 0

ಬೆಂಗಳೂರು: ಶನಿವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರ ಕಾರು ಚಾಲಕ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾಜ್ಯಪಾಲರನ್ನು ವಿಮಾನ ನಿಲ್ದಾಣದಿಂದ ಕರೆದೊಯ್ಯಲು ಆಗಮಿಸಿದ್ದ ಚಾಲಕ ರವಿಕುಮಾರ ಅವರಿಗೆ ರಾಜ್ಯಪಾಲರನ್ನು ಕರೆದೊಯ್ಯುವ ಮೊದಲೇ ಹೃದಯಾಘಾತವಾಗಿದೆ. ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ವನಿರ್ಧರಿತ ಶೆಡ್ಯೂಲ್‌ನಂತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಜ್ಯಪಾಲರನ್ನು ಕರೆದೊಯ್ಯುವ ಸಲುವಾಗಿ ರವಿಕುಮಾರ ಬಂದಿದ್ದರು.
ವಿಮಾನದಿಂದ ರಾಜ್ಯಪಾಲರ ಬರುವಿಕೆಗಾಗಿ ರವಿಕುಮಾರ ಎಸ್. ಕಾಳೆ ವಿಮಾನ ನಿಲ್ದಾಣದ ವಿವಿಐಪಿ ಲಾಂಜ್‌ ಬಳಿ ಕಾಯುತ್ತಿದ್ದರು. ರಾಜ್ಯಪಾಲರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾರು ಹತ್ತಲು ತಯಾರಿ ನಡೆದಿತ್ತು. ಆಗ ಕಾರು ಚಾಲಕ ರವಿ ಕುಮಾರ ಕಾಳೆಗೆ ಎದೆ ನೋವು ಕಾಣಿಸಿಕೊಂಡಿದೆ. ವಿಐಪಿ ಲಾಂಜ್‌ನಲ್ಲಿದ್ದ ಕಾರಿನಲ್ಲಿಯೇ ಅವರು ಕುಸಿದು ಬಿದ್ದರು. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಆಸ್ಟರ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ,ಮಧ್ಯರಾತ್ರಿ ರವಿಕುಮಾರ ಅವರು ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.
ನಂತರ ಹೆಚ್ಚುವರಿ ವಾಹನ ಬಳಸಿಕೊಂಡು ರಾಜ್ಯಪಾಲರು ಬಳಿಕ ರಾಜಭವನಕ್ಕೆ ತೆರಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಶಾಸಕ ಮಾಡಾಳು ವಿರೂಪಾಕ್ಷಪ್ಪ ಐದು ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ : ನ್ಯಾಯಾಲಯ ಆದೇಶ

 

 

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement