ಶಿವಮೊಗ್ಗದಲ್ಲಿ ಲಾರಿ-ಕಾರು ನಡುವೆ ಡಿಕ್ಕಿ: ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಇಂದು ಭಾನುವಾರ, ಬೆಳ್ಳಂಬೆಳಗ್ಗೆ ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಮೃತರನ್ನು ವಿವೇಕ (21), ಕಾರ್ತಿಕ (23) ಹಾಗೂ ಮೋಹನ (22) ಎಂದು ಗುರುತಿಸಲಾಗಿದೆ. ರುದ್ರೇಶ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.
ಶಿವಮೊಗ್ಗದಿಂದ ಸವಳಂಗ ಕಡೆಗೆ ಹೋಗುತ್ತಿದ್ದ ಬೊಲೆನೋ ಕಾರು ಹಾಗೂ ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement