ದುಬೈನಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಪತ್ತೆ

ನವದೆಹಲಿ: ಶನಿವಾರ ದುಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಪತ್ತೆಯಾಗಿದ್ದು, ಘಟನೆಯ ಕುರಿತು ವಿಮಾನಯಾನ ನಿಯಂತ್ರಕ ಡಿಜಿಸಿಎ ತನಿಖೆ ನಡೆಸುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿ737-800 ವಿಮಾನವು ಕೇರಳದ ಕ್ಯಾಲಿಕಟ್‌ನಿಂದ ಬಂದಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ ಹಾವು ಕಂಡುಬಂದಿದ್ದು, ವಿಮಾನ ನಿಲ್ದಾಣದ ಅಗ್ನಿಶಾಮಕ ಸೇವೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಇದು ನೆಲದ ನಿರ್ವಹಣೆಯ ಲೋಪವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಸೂಕ್ತ ಜಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರತಿಕ್ರಿಯೆಗಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರನ್ನು ಸಂಪರ್ಕಿಸಲಾಗಲಿಲ್ಲ.

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement