ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆಯ ಹಿನ್ನೆಲೆಯ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 12ರಂದು ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ತಿಳಿಸಿದ್ದಾರೆ.
ಈ ರಜೆ ಸರಿದೂಗಿಸಲು ಮುಂದಿನ ದಿನಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಮತ್ತು ಮಳೆಯಿದೆ. ಭಾನುವಾವೂ ಮಳೆಯ ಪ್ರಭಾವ ಮುಂದುವರೆದಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ