ರಾಯಚೂರು: ಬಾಲಕಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆ

ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿ ಕ್ಯಾಂಪ್‌ನಲ್ಲಿ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್  ಸೋಂಕು ತಗುಲಿತ್ತು ಎಂಬುದು ಪತ್ತೆಯಾಗಿದೆ. ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಅಧ್ಯಯನ ಮಾಡುತ್ತಿದೆ. ರೋಗ್ಯ ಇಲಾಖೆ ಅಧಿಕಾರಿಗಳ ರಾಜ್ಯಮಟ್ಟದ ತಂಡ ಗ್ರಾಮಕ್ಕೆ ದೌಡಾಯಿಸಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡಿದೆ.
ಜ್ವರ, ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿಯನ್ನು ನವೆಂಬರ್‌15ರಂದು ಬಳ್ಳಾರಿಯ ವಿಮ್ಸ್ ನಲ್ಲಿ ದಾಖಲಿಸಲಾಗಿತ್ತು. ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸೋಂಕಿನ ಪರೀಕ್ಷೆ ನಡೆಸಲಾಗಿತ್ತು. ಆದರೆ, ಎಲ್ಲ ವರದಿಗಳು ನೆಗೆಟಿವ್ ಬಂದಿದ್ದವು. ಬಾಲಕಿ ಗುಣಮುಖಲಾದಳು ಹಾಗೂ ಅವಳನ್ನು ಬಿಡುಗಡೆ ಮಾಡಲಾಗಿತ್ತು.
ಶಂಕೆಗೊಂಡ ವೈದ್ಯಾಧಿಕಾರಿಗಳು ಬಾಲಕಿಯ ನೆಗೆಟಿವ್ ವರದಿಗಳನ್ನು ಪುಣೆಗೆ ಪರೀಕ್ಷೆಗೆ ಕಳುಹಿಸಿದ್ದರು, ಆ ವರದಿಯಲ್ಲಿ ಝಿಕಾ ಸೋಂಕು ತಗುಲಿರುವುದು ಖಚಿತಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಕೋಳಿಕ್ಯಾಂಪ್ ಗೆ ಭೇಟಿ ನೀಡಿರುವ ರಾಜ್ಯ ಮಟ್ಟದ ತಂಡ ಕುಟುಂಬದ ಮಾದರಿಗಳನ್ನು ಪಡೆದಿದೆ. ಸದ್ಯಕ್ಕೆ ಯಾರಿಗೂ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಝಿಕಾ ವೈರಸ್ ಪತ್ತೆಯಾದ ಮಗುವಿನ ಮನೆಗೆ ರಾಯಚೂರು ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ ನೀಡಿದ್ದಾರೆ. ಆರೋಗ್ಯ ಜಾಗೃತಿ ಮೂಡಿಸಲಾಗಿದೆ. ಮಗುವಿನ ರಕ್ತದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದು ತಿಳಿದುಬಂದಿತು. ಮಗುವಿಗೆ ಯಾವುದೇ ಟ್ರಾವೆಲ್ ಹಿಸ್ಟರಿಯೂ ಇರಲಿಲ್ಲ. ವರದಿ ಕೈ ಸೇರುವಷ್ಟರಲ್ಲಿ ಮಗು ಚೇತಿರಿಸಿಕೊಂಡಿದೆ. ಆರೋಗ್ಯ ಇಲಾಖೆ ಮತ್ತೊಮ್ಮೆ ಕಳುಹಿಸಿದ್ದ ಬಾಲಕಿ ಹಾಗೂ ಪೋಷಕರ ಮಾದರಿಗಳು ನೆಗೆಟಿವ್ ಬಂದಿದೆ ಎಂದು ಡಿಎಚ್‌ಒ ಡಾ.ಸುರೇಂದ್ರ ಬಾಬು ತಿಳಿಸಿದ್ದಾರೆ. ಸಾಂಕ್ರಾಮಿಕ ರೋಗ ತಜ್ಞರ ವಿಶೇಷ ತಂಡ ಬಂದಿದ್ದು ಪರಿಶೀಲನೆ ನಡೆಸಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

 

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement