ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖಗೆ ಜಾಮೀನು ನೀಡಿ ಕೆಲವೇ ನಿಮಿಷಗಳಲ್ಲಿ ತಡೆಹಿಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಇಂದು, ಸೋಮವಾರ ಜಾಮೀನು ಮಂಜೂರು ಮಾಡಿದ ಕೆಲವೇ ಕ್ಷಣಗಳಲ್ಲಿ ಅದನ್ನು 10 ದಿನಗಳ ಕಾಲ ತಡೆಹಿಡಿಯಿತು.
ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಲಾವಕಾಶ ಕೋರಿದ ಬೆನ್ನಲ್ಲೇ ಇದನ್ನು 10 ದಿನಗಳ ಕಾಲ ತಡೆಹಿಡಿಯಿತು.
71ರ ಹರೆಯದ ಅನಿಲ ದೇಶಮುಖ ಅವರು ಮೊಟ್ಟಮೊದಲ ಬಾರಿಗೆ ಜಾರಿ ನಿರ್ದೇಶನಾಲಯ (ಇಡಿ)ದ ವಿರುದ್ಧ ದಾಖಲಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಅಕ್ಟೋಬರ್ 4 ರಂದು ಜಾಮೀನು ಮಂಜೂರು ಮಾಡಿದ ತಕ್ಷಣ ಈ ಪ್ರಕರಣದಲ್ಲಿಯೂ ಜಾಮೀನು ಕೋರಿದ್ದರು, ಆದರೆ ವಿಶೇಷ ನ್ಯಾಯಾಲಯವು ಅವರ ಅರ್ಜಿಯನ್ನು ತಿರಸ್ಕರಿಸಿತ್ತು.
ಎನ್‌ಸಿಪಿ ನಾಯಕನನ್ನು ನವೆಂಬರ್ 2, 2021 ರಂದು ಬಂಧಿಸಲಾಯಿತು ಮತ್ತು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಕೊರೊನರಿ ಆಂಜಿಯೋಗ್ರಫಿಗಾಗಿ ಅವರನ್ನು ಅಕ್ಟೋಬರ್‌ನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾರ್ಚ್ 2021 ರಲ್ಲಿ, ಹಿರಿಯ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಅವರು ಮುಂಬೈನ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಿಂದ ತಿಂಗಳಿಗೆ ₹ 100 ಕೋಟಿ ಸಂಗ್ರಹಿಸಲು ಪೊಲೀಸ್ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದರು ಎಂದು ಆಗ ಗೃಹ ಸಚಿವರಾಗಿದ್ದ ದೇಶಮುಖ್ ವಿರುದ್ಧ ಆರೋಪಿಸಿದ್ದರು.
ಮಹಾರಾಷ್ಟ್ರದ ಗೃಹ ಸಚಿವರಾಗಿದ್ದಾಗ ಅನಿಲ ದೇಶಮುಖ ಅವರು ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಮೂಲಕ ₹ 4.70 ಕೋಟಿ ಸಂಗ್ರಹಿಸಿದ್ದಾರೆ ಎಂದು ಪ್ರಕರಣದ ಆರ್ಥಿಕ ಅಂಶದ ತನಿಖೆ ನಡೆಸುತ್ತಿರುವ ಇ.ಡಿ. ಆರೋಪಿಸಿದೆ.
ಇದಕ್ಕೂ ಮುನ್ನ, ಮುಂಬೈನ ವಿಶೇಷ ನ್ಯಾಯಾಲಯವು ನವೆಂಬರ್ 18 ರಂದು ದೇಶಮುಖ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ವಜಾಗೊಂಡ ಪೊಲೀಸ್‌ ಅಧಿಕಾರಿ ಸಚಿನ್ ವಝೆಗೆ ಜಾಮೀನು ನೀಡಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಡೆದ ಬಾಂಬ್ ಬೆದರಿಕೆ ಘಟನೆ ಮತ್ತು ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರಾನ್ ಹತ್ಯೆ ಸೇರಿದಂತೆ ಇತರ ಪ್ರಕರಣಗಳಲ್ಲೂ ಆರೋಪಿಯಾಗಿರುವ ವಝೆ ಜೈಲಿನಿಂದ ಹೊರಬಂದಿಲ್ಲ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರ ಏಪ್ರಿಲ್‌ನಲ್ಲಿ ಹೈಕೋರ್ಟ್ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿತ್ತು. ಈ ವಿಚಾರಣೆಯ ಆಧಾರದ ಮೇಲೆ ಸಿಬಿಐ, ಭ್ರಷ್ಟಾಚಾರ ಮತ್ತು ಅಧಿಕೃತ ಅಧಿಕಾರದ ದುರುಪಯೋಗದ ಆರೋಪದ ಮೇಲೆ ದೇಶಮುಖ್ ಮತ್ತು ಅವರ ಸಹಚರರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದೆ.
ಮಾಜಿ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ದೇಶಮುಖ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸಿದ ನಂತರ ದೇಶಮುಖ್ ಅವರು ಏಪ್ರಿಲ್ 2021 ರಲ್ಲಿ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement