ಇಬ್ಬರು ಪುಟ್ಟ ಹೆಣ್ಣಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ವಿಜಯಪುರ: ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರಭಾಗದಲ್ಲಿರುವ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟವರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಎಂದು ಗುರುತಿಸಲಾಗಿದೆ. ಈ ಘಟನೆಗೆ ಕೌಟುಂಬಿಕ ಕಲಹವೋ ಅಥವಾ ಬೇರೆ ಯಾವ ಕಾರಣ ಎಂಬುದು ತಿಳುದುಬರಬೇಕಿದೆ. ಕಾಲುವೆಯಲ್ಲಿ ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಶವ ಪತ್ತೆ ಆಗಿದೆ. ಮತ್ತೋರ್ವ ಹೆಣ್ಣು ಮಗುವಿನ ಶವಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

3 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement