ತಂದೆಯನ್ನ ಕೊಂದು ದೇಹ ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆದ ಮಗ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿರುವ ಕೊಲೆಯೊಂದು ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.ಬಾಗಲಕೋಟೆಯ ಮುಧೋಳ ನಗರದಲ್ಲಿ ಮಗ ತನ್ನ ತಂದೆಯನ್ನ ಕೊಂದು ತುಂಡುತುಂಡಾಗಿ ಕತ್ತರಿಸಿ, ಕೊಳವೆ ಬಾವಿಗೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯಾದ ವ್ಯಕ್ತಿಯನ್ನು ಪರಶುರಾಮ ಕುಳಲಿ (54) ಎಂದು ಗುರುತಿಸಲಾಗಿದೆ. ಮಗ ವಿಠ್ಠಲ ಕುಳಲಿ(21) ಎಂಬಾತನೇ ತನ್ನ ತಂದೆಯನ್ನು ಕೊಲೆ ಮಾಡಿದ ಆರೋಪಿ. ಡಿಸೆಂಬರ್ 6 ರಂದು ಕೊಲೆ ನಡೆದಿದೆ ಎಂದು ಹೇಳಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಂದೆ ಕುಡಿದ ಮತ್ತಿನಲ್ಲಿ ಮಗನಿಗೆ ಬಯ್ಯುವುದು, ಹಲ್ಲೆ ಮಾಡುವುದು ಮಾಡುತ್ತಿದ್ದನಂತೆ.

ಈ ಉಪಟಳಕ್ಕೆ ರೋಸಿ ಹೋಗಿದ್ದ ಮಗ, ಕಬ್ಬಿಣದ ರಾಡ್‌ನಿಂದ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದು, ನಂತರ ಮೃತದೇಹವನ್ನು ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಇರುವ ತನ್ನ ಹೊಲಕ್ಕೆ ತೆಗೆದುಕೊಂಡು ಹೋಗಿ ಕೊಳವೆ ಬಾವಿಗೆ ಹಾಕಲು ಹೋಗಿದ್ದಾನೆ. ಕೊಳವೆ ಬಾವಿಯಲ್ಲಿ ದೇಹ ಕೆಳಗೆ ಇಳಿಯದೇ ಇದ್ದಾಗ, ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿ, ಕೊಳವೆ ಬಾವಿಯೊಳಗೆ ಹಾಕಿದ್ದಾನೆ ಎಂದು ವರದಿಗಳು ತಿಳಿಸಿವೆ.
ಒಂದು ವಾರ ಏನೂ ಆಗದವರಂತೆ ಆರಾಮಾವಾಗಿ ಓಡಾಡಿಕೊಂಡಿದ್ದ. ಕೊಲೆಯಾದ ಪರಶುರಾಮ ಪತ್ನಿ ತನ್ನ ಪತಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದರು. ನಂತರ ಪೊಲೀಸರು ಅನುಮನದ ಮೇಲೆ ಮಗನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ರಹಸ್ಯ ಬಯಲಾಗಿದೆ. ನಂತರ ಜೆಸಿಬಿಯಿಂದ ಕೊಳವೆ ಬಾವಿ ಅಗೆದು ಮೃತದೇಹದ ಕೆಲ ಭಾಗಗಳನ್ನ ಪೊಲೀಸರು ಹೊರ ತೆಗೆದಿದ್ದಾರೆ. ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

2.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement