ಪತ್ನಿ-ನಾಲ್ವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚೆನ್ನೈ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಮತ್ತೋರ್ವ ಪುತ್ರಿ 9 ವರ್ಷದ ಬಾಲಕಿಯನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಯ ಪ್ರಕಾರ, ಪಳನಿಸಾಮಿ (45) ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ ವಲ್ಲಿ, ಪುತ್ರಿಯರಾದ ತ್ರಿಷಾ, ಮೋನಿಶಾ, ಶಿವಶಕ್ತಿ ಮತ್ತು ಭೂಮಿಕಾ ಮತ್ತು ಮಗ ಧನುಷ್ ಅವರೊಂದಿಗೆ ಚೆಂಗಂನಲ್ಲಿರುವ ಅವರ ಮನೆಯಲ್ಲಿ ವಾಸಿಸುತ್ತಿದ್ದರು.ಪಳನಿಸಾಮಿ ಚೆಂಗಂ ಸಮೀಪದ ಒರಂತವಾಡಿ ಗ್ರಾಮದ ಕೃಷಿ ಕಾರ್ಮಿಕ. ಮಂಗಳವಾರ ಬೆಳಗ್ಗೆಯಿಂದ ಪಳನಿಸ್ವಾಮಿ, ಅವರ ಪತ್ನಿ ಮತ್ತು ಮಕ್ಕಳು ಮನೆಯಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪಳನಿಸ್ವಾಮಿ ಅವರ ಮನೆಯನ್ನು ಒಡೆದಿದ್ದಾರೆ. ಮನೆಯಲ್ಲಿ, ಪಳನಿಸ್ವಾಮಿ ಅವರ 37 ವರ್ಷದ ಪತ್ನಿ, 3 ಪುತ್ರಿಯರು ಮತ್ತು ಮಗ ಶವವಾಗಿ ಪತ್ತೆಯಾಗಿದ್ದು, ಪಳನಿಸಾಮಿ ಸೀಲಿಂಗ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿರುವುದು ಪೊಲೀಸರಿಗೆ ಕಂಡುಬಂದಿದೆ.
ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮತ್ತೊಬ್ಬ ಹೆಣ್ಣು ಮಗು ಭೂಮಿಕಾಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.
ಆದಾಗ್ಯೂ, ಅಪರಾಧಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾಧ್ಯವಿರುವ ಎಲ್ಲ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

ಪ್ರಮುಖ ಸುದ್ದಿ :-   ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ... : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement