ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆ: ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರವು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಿದೆ.
ಸಮಿತಿಗೆ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷರಾದರೆ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಅಂಗಾರ, ಪ್ರಭು ಚವ್ಹಾಣ ಹಾಗೂ ಡಾ.ಕೆ.ಸುಧಾಕರ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ನಂತರ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ಮಾಡಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡಬೇಕೆಂದು ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲೇ ಸರ್ಕಾರ ಈ ಸಮಿತಿ ರಚಿಸಿದೆ.

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಡಿಸೆಂಬರ್‌ 11 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ದಲಿತ ಸಂಘರ್ಷ ಸಮಿತಿ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮಿತಿ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಬೇಕೆಂದು ಪ್ರತಿಭಟನಾಕಾರರು ಬೇಡಿಕೆ ಇಟ್ಟಿದ್ದರು. ವ
ಪರಿಶಿಷ್ಟ ಜಾತಿಯಲ್ಲಿರುವ ಹಲವಾರು ಸಮುದಾಯಗಳಿಗೆ ಸಂವಿಧಾನಬದ್ಧವಾಗಿ ಮೀಸಲಾತಿ ನೀಡಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಸದಾಶಿವ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು.
ಪರಿಶಿಷ್ಟ ಜಾತಿಗಳಿಗೆ ಶೇಕಡಾ 15ರಷ್ಟು ಒಳ ಮೀಸಲಾತಿ ನೀಡಬೇಕೆಂದು ನ್ಯಾಯಮೂರ್ತಿ ಸದಾಶಿವ ಆಯೋಗ ಶಿಫಾರಸು ಮಾಡಿದೆ.
ಆದರೆ ಈ ಆಯೋಗದ ಶಿಫಾರಸ್ಸಿಗೆ ಪರ-ವಿರೋಧ ವ್ಯಕ್ತವಾಗಿದ್ದರಿಂದ ವರದಿಯನು ಅನುಷ್ಠಾನ ಮಾಡಲು ಸರ್ಕಾರ ಹಿಂದೇಟು ಹಾಕಿತ್ತು. ಈಗ ರಾಜ್ಯ ಸರ್ಕಾರ ಸಂಪುಟ ಉಪಸಮಿತಿಯನ್ನು ರಚಿಸಿದೆ.

ಪ್ರಮುಖ ಸುದ್ದಿ :-   ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement