ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದೇನೆ: ವೈಎಸ್‌ವಿ ದತ್ತ

ಬೆಂಗಳೂರು:: ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದೇನೆ, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್‌ ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು.
ಕಾಂಗ್ರೆಸ್‌ ಸೇರ್ಪಡೆ ಕುರಿತು ಮಾತನಾಡಿದಅವರು, ನಾನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷಗಳಷ್ಟು ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20ಕ್ಕೂ ಹೆಚ್ಚು ವರ್ಷಗಳಿಂದ ಇದ್ದೇನೆ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವಂತೆ ಒತ್ತಾಯಿಸುತ್ತಿದ್ದಾರೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರ ಒತ್ತಾಯವಾಗಿದೆ. ಆದರೆ ಸೇರ್ಪಡೆ ಯಾವತ್ತು ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದರು.

ನನ್ನ ಜತೆಗಿರುವ ಕಾರ್ಯಕರ್ತರು ಅತಂತ್ರರಾಗಬಾರದು ಎಂದು ಕಾಂಗ್ರೆಸ್‌ ಸೇರಲು ಮುಂದಾಗಿದ್ದೇನೆ. ಕಾರ್ಯಕರ್ತರು ದತ್ತಣ್ಣ ನಡುನೀರಿನಲ್ಲಿ ಕೈಬಿಟ್ಟರು ಎಂದು ಹೇಳಬಾರದು. ಅವರಿಗೊಂದು ನೆಲೆ ಕಲ್ಪಿಸಿ, ನಂತರ ರಾಜಕೀಯದಿಂದ ನಿವೃತ್ತಿಯಾಗಬೇಕು ಎಂಬ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ ಎಂದರು.
ಎಚ್‌.ಡಿ.ದೇವೇಗೌಡರು ಹಾಗೂ ನನ್ನದು ಪಕ್ಷಕ್ಕೆ ಮೀರಿದ ಸಂಬಂಧ. ದೇವೇಗೌರ ಬಗ್ಗೆ ಪೂಜ್ಯ ಭಾವನೆ ಇದೆ, ನಾನು ಹತ್ತಾರು ಭಾರೀ ಈ ವಿಚಾರ ಹೇಳಲು ದೇವೇಗೌಡರನ್ನು ಭೇಟಿಯಾಗಿದ್ದೆ, ಆದರೆ ನನಗೆ ಹೇಳಲು ಸಾಧ್ಯವಾಗಿಲ್ಲ. ನನ್ನ ಪರಿಷತ್‌ ಸದಸ್ಯನನ್ನಾಗಿ ಮಾಡಿದ್ದು ದೇವೇಗೌಡರು ಮತ್ತು ಕುಮಾರಸ್ವಾಮಿ. ಅವರ ಋಣ ನನ್ನ ಮೇಲೆ ಇದೆ. ಆದರೆ ಕ್ಷೇತ್ರದಲ್ಲಿನ ಹೊಸ ಬೆಳವಣಿಗೆಗಳು ಕಾಂಗ್ರೆಸ್‌ ಕಡೆಗೆ ಮುಖಮಾಡುವಂತೆ ಮಾಡಿವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement