ಯಲ್ಲಾಪುರ: ಅಪಘಾತದಲ್ಲಿ ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ನಿಧನ

posted in: ರಾಜ್ಯ | 0

ಯಲ್ಲಾಪುರ: ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ  ಬಾಳೆಹದ್ದ (59) ಅವರು ಉತ್ತರ ಕನ್ನಡ ಜಿಲ್ಲೆಯ
ಶಿರಸಿ-ಯಲ್ಲಾಪುರ ಮಧ್ಯದ ರಾಜ್ಯ ಹೆದ್ದಾರಿಯಲ್ಲಿ ಹಿತ್ಳಳ್ಳಿಯಲ್ಲಿ ಬಳಿ ಸಂಭವಿಸಿದ ಅಪಘಾತದಲ್ಲಿ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ಯಕ್ಷಗಾನ ಭಾಗವತಿಕೆ ಹಾಗೂ ಸಂಗೀತಗಾರರೂ ಆಗಿದ್ದ ಯಲ್ಲಾಪುರ ತಾಲ್ಲೂಕಿನ ತಿಮ್ಮಪ್ಪ ಭಾಗವತ ಬಾಳೆಹದ್ದ ಎರಡು ಕಾರುಗಳ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ನಿಧನರಾದರು.
ಶಿರಸಿ -ಯಲ್ಲಾಪುರ ರಾಜ್ಯ ಹೆದ್ದಾರಿ ಹಿತ್ಲಳ್ಳಿ ಕ್ರಾಸ್ ಬಳಿ ಅವರಿದ್ದ ಕಾರಿಗೆ, ಎದುರಿನಿಂದ ಬಂದ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರು ತಂದೆ, ತಾಯಿ, ಓರ್ವ ಪುತ್ರ, ಪುತ್ರಿ ಮತ್ತು ಅಪಾರ ಬಂಧು ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಪ್ರಸಿದ್ಧ ಭಾಗವತರಾಗಿದ್ದ ತಂದೆ ಕೃಷ್ಣ ಭಾಗವತ ಬಾಳೆಹದ್ದ ಅವರಿಂದ ಯಕ್ಷಗಾನ ಭಾಗವತಿಕೆ ಕಲಿತ ಅವರು ನಂತರ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಹಿಂದುಸ್ಥಾನೀ ಸಂಗೀತವನ್ನೂ ಅಭ್ಯಾಸ ಮಾಡಿದ್ದರು.ಅಲ್ಲದೆ, ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದರು. ತಾವೇ ಮಕ್ಕಳ ತಾಳಮದ್ದಲೆ ಕೂಟ ಸ್ಥಾಪಿಸಿದ್ದರು. ಮಕ್ಕಳಿಗೆ ಯಕ್ಷಗಾನದ ಅರ್ಥಗಾರಿಕೆ, ಭಾಗವತಿಕೆ, ಸಂಗೀತ ಕಲಿಸುತ್ತಿದ್ದ ಅವರು ನಾಟಕ ರಂಗಭೂಮಿಗೆ ಸಂಗೀತವನ್ನೂ ನೀಡುತ್ತಿದ್ದರು. ಸೋಂದಾದ ಯಕ್ಷಬಳಗದಲ್ಲಿಯೂ ಇದ್ದರು. ಅಲ್ಲದೆ ರಂಗಾಯಣ ಮೂಲಕ ಖೈದಿಗಳಿಗೆ ನಾಟಕ ಕಲಿಸುವ ತಂಡದಲ್ಲಿಯೂ ಇದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು-ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ..ಇದರ ಪ್ರಕ್ರಿಯೆ ಹೇಗೆ..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2.7 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement