ವರದಕ್ಷಿಣೆ ಕಿರುಕುಳ ಪ್ರಕರಣ: ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

posted in: ರಾಜ್ಯ | 0

ಬೆಂಗಳೂರು: ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಸಿನೆಮಾ ನಟಿ ಹಾಗೂ ಕಿರುತೆರೆ ಕಲಾವಿದೆ ಅಭಿನಯಾ ಅವರಿಗೆ ಹೈಕೋರ್ಟ್‌ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ. ವರದಕ್ಷಿಣ ಕಿರುಕುಳಕ್ಕೆ ಸಂಬಂಧಿಸಿದಂತೆ ಅಭಿನಯಾ ಅಣ್ಣ ಶ್ರೀನಿವಾಸ ಅವರ ಪತ್ನಿ ಲಕ್ಷ್ಮೀದೇವಿ ಎಂಬುವವರು ಈ ಹಿಂದೆ ಅಭಿನಯಾ ಮತ್ತು ಅವರ ತಾಯಿ ಜಯಮ್ಮ ವಿರುದ್ಧ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನ್ಯಾ.ಎಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ: 1998ರಲ್ಲಿ ಶ್ರೀನಿವಾಸ ಅವರ ಜತೆಗೆ ಲಕ್ಷ್ಮೀದೇವಿ ಅವರ ವಿವಾಹವಾಗಿತ್ತು. ವರದಕ್ಷಿಣಿಯಾಗಿ 80 ಸಾವಿರ ನಗದು, ಚಿನ್ನಾಭರಣವನ್ನು ಪಡೆದಿದ್ದರು. ಬಳಿಕ ಮತ್ತೆ ಹಣ ತರುವಂತೆ ಕಿರುಕುಳ ನೀಡಿದ್ದರು. ಇದರಿಂದ ಬೇಸತ್ತ ಲಕ್ಷ್ಮೀದೇವಿ 2002ರಲ್ಲಿಯೇ ಇವರೆಲ್ಲರ ಮೇಲೆ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದರು.
2012ರಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಐವರು ಆರೋಪಿಗಳಿಗೆ (ಜಯಮ್ಮ, ಅಭಿನಯಾ, ಶ್ರೀನಿವಾಸ, ರಾಮಕೃಷ್ಣ ಮತ್ತು ಚೆಲುವರಾಜು) ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಲಕ್ಷ್ಮೀದೇವಿ ಹಾಗೂ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement