ಜಿಪಂ, ತಾಪಂ ಕ್ಷೇತ್ರ ಮರುವಿಂಗಡಣೆಗೆ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆ, 5 ಲಕ್ಷ ರೂ. ದಂಡ

ಬೆಂಗಳೂರು; ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಛೀಮಾರಿ ಹಾಕಿರುವ ಹೈಕೋರ್ಟ್ ಸರ್ಕಾರಕ್ಕೆ 5 ಲಕ್ಷ ರೂ.ಗಳ ದಂಡ ವಿಧಿಸಿದೆ.
ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮಕ್ಕೆ ಛಾಟಿ ಬೀಸಿದೆ.
ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ 2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂ.ಗಳನ್ನು ಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಸರ್ಕಾರದ ಪರ ವಕೀಲರು ಮತ್ತೆ 12 ವಾರ ಕಾಲಾವಕಾಶ ಕೇಳಿದದರು. ಅದಕ್ಕೆ ಸಿಟ್ಟಾದ ಮುಖ್ಯನ್ಯಾಯಮೂರ್ತಿಗಳು, ಅರ್ಜಿ ಸಲ್ಲಿಕೆಯಾಗಿ ಒಂದು ವರ್ಷ ಕಳೆದಿದೆ. ಇಲ್ಲಿಯವರೆಗೆ ಮೂರನೇ ಸಲ ಕಾಲಾವಕಾಶ ಕೋರಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ನ ಆದೇಶಗಳನ್ನು ಪಾಲಿಸಬೇಕೆಂಬ ಉದ್ದೇಶವಿಲ್ಲವೇ? ಎಂದು ನ್ಯಾಯಪೀಠ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಪದೇ ಪದೇ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ ಒಂದಿಂಚು ಮುಂದಕ್ಕೆ ಹೋಗಿಲ್ಲ. ಮತ್ತೆ ಮತ್ತೆ ಕಾಲಾವಕಾಶ ಕೋರಲಾಗುತ್ತಿದೆ ಎಂದು ನ್ಯಾಯಪೀಠ ಅಭಿಪ್ರಾಯ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ, ಜನವರಿ 30ರಗೆ ತಾ.ಪಂ, ಜಿ.ಪಂ ಕ್ಷೇತ್ರ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ‌ಪೂರ್ಣಗೊಳಿಸುವಂತೆ ಗಡುವು ನೀಡಿದೆ ಹಾಗೂ , ಫೆ. 2ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಪ್ರಮುಖ ಸುದ್ದಿ :-   ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಗಾಳಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement