ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದ್ದರು. ನಂತರ ಕರ್ನಾಟಕಕ್ಕೆ ಬರುವ ಕಾಲುವೆಗೆ ಗೋಡೆ ಕಟ್ಟಿರುವುದೇ ಕಾಂಗ್ರೆಸ್ ಸಾಧನೆ. ಎಂದು ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರ ಹೆಚ್ಚು ಕೆಲಸ ಮಾಡಿದೆ. ನಾನು ನೀರಾವರಿ ಸಚಿವನಾಗಿದ್ದಾಗ ನಿರ್ಮಿಸಲಾಗಿದೆ. ನಮ್ಮ ಸರ್ಕಾರದಲ್ಲಿ ನಿರ್ಮಿಸಿದ ಕಾಲುವೆಗೆ ಕಾಂಗ್ರೆಸ್‌ ಸರ್ಕಾರ ಗೋಡೆಕಟ್ಟಿದೆ. ಹೀಗಾಗಿ ಕಾಂಗ್ರೆಸ್‌ನವರಿಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಬಡವರಿಗೆ ಉತ್ತಮ ಪ್ರಾಥಮಿಕ ಚಿಕಿತ್ಸೆ ನೀಡಲು ಧಾರವಾಡ ಜಿಲ್ಲೆಯಲ್ಲಿ 7 ನಮ್ಮ ಕ್ಲಿನಿಕ್ ಆರಂಭ ಮಾಡುತ್ತಿದ್ದೇವೆ. ರಾಜ್ಯಾದ್ಯಂತ ಒಂದನೇ ಹಂತದಲ್ಲಿ ನೂರಕ್ಕೂ ಹೆಚ್ಚು ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ‌. ಇದನ್ನು ಉತ್ತೇಜಿಸಲು ಮುಂದಿನ ಬಜೆಟ್ ನಲ್ಲಿ ಹಣ ಮೀಸಲು ಮೀಸಲಿಡಲಾಗುವುದು. ಟೆಲಿಮೆಡಿಸನ್ ಸೇರಿದಂತೆ ಹಲವಾರು ಪರೀಕ್ಷೆಗಳು ಆಸ್ಪತ್ರೆಯಲ್ಲಿ ಲಭ್ಯ ಇರಲಿವೆ‌ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement