ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 310 ಪ್ರಾಂಶುಪಾಲರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ಪ್ರಥಮದ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವಂತ 310 ಪ್ರಾಂಶುಪಾಲರ ಗ್ರೇಡ್-1 ಹುದ್ದೆಗಳಿಗೆ ನೇರ ನೇಮಕಾತಿ (Direct Recruitment) ಮೂಲಕ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಪತ್ರದ ಅಧಿಸೂಚನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಪರೀಕ್ಷಾ ಪ್ರಾಧಿಕರಾವನ್ನಾಗಿ ನಿಯೋಜಿಸಲಾಗಿದೆ.
ಹುದ್ದೆಗಳ ವಿವರ
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ – 265
ಕಲ್ಯಾಣ ಕರ್ನಾಟಕ ವೃಂದ -45
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 5000 ರೂ.ಗಳು
ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದ್ರೇ ಪ್ರಕ್ರಿಯೆ ಶುಲ್ಕವಾಗಿ 2,500 ರೂ.ಗಳು.

ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 16-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2023
ಇ-ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ 17-01-2023
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ https://kea.kar.nic.in  ಜಾಲತಾಣದ ಮೂಲಕ ಆನ್ ಲೈನ್ ಮೂಲಕವೇ ಸಲ್ಲಿಸಬೇಕು.
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 100 ಅಂಕಗಳಿಗೆ 2 ಗಂಟೆಯ ಪರೀಕ್ಷೆ ನಡೆಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಪ್ಪದೇ ಕೆಇಎ ಅಧಿಕೃತ ವೆಬ್ ಸೈಟ್ https://kea.kar.nic.in ಗೆ ಭೇಟಿ ನೀಡಬಹುದು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement