17 ವರ್ಷದ ವಿದ್ಯಾರ್ಥಿನಿ ಮೇಲೆ ಎಸಿಡ್ ದಾಳಿ : ಆಕೆಯ ಸ್ಥಿತಿ ಗಂಭೀರ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ : ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು, ಬುಧವಾರ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು 17 ವರ್ಷದ ವಿದ್ಯಾರ್ಥಿನಿಯ ಮೇಲೆ ಮೇಲೆ ಆಸಿಡ್ ಎರಚಿದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಮತ್ತು ರಾಸಾಯನಿಕವು ಆಕೆಯ ಮುಖಕ್ಕೆ ಚಿಮ್ಮಿ ಆಕೆಯ ಕಣ್ಣಿಗೂ ನುಗ್ಗಿದೆ ಎಂದು ಹುಡುಗಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹುಡುಗಿ, ಇಬ್ಬರು ಶಂಕಿತರನ್ನು ಗುರುತಿಸಿದ್ದು, ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಘಟನೆಯ ಆಘಾತಕಾರಿ ದೃಶ್ಯಗಳಲ್ಲಿ ಹುಡುಗಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರಲ್ಲಿ ಒಬ್ಬನು 17 ವರ್ಷದ ವಿದ್ಯಾರ್ಥಿನಿಯ ಮೇಲೆ ದ್ರವ ಪದಾರ್ಥವನ್ನು ಎಸೆದಿರುವುದು ಕಂಡುಬರುತ್ತದೆ. ನಂತರ ಅವಳು ತೀವ್ರವಾದ ನೋವಿನಲ್ಲಿ ತನ್ನ ಮುಖವನ್ನು ಹಿಡಿದುಕೊಂಡು ಓಡುತ್ತಿರುವುದನ್ನು ಕಾಣಬಹುದು.
ನನ್ನ ಇಬ್ಬರು ಹೆಣ್ಣುಮಕ್ಕಳು, ಒಬ್ಬಳಿಗೆ 17 ವರ್ಷ ಮತ್ತು ಮತ್ತೊಬ್ಬಳಿಗೆ 13 ವರ್ಷ, ಇಂದು ಬೆಳಿಗ್ಗೆ ಒಟ್ಟಿಗೆ ಹೋಗಿದ್ದರು. ಇದ್ದಕ್ಕಿದ್ದಂತೆ, ಬೈಕ್‌ನಲ್ಲಿ ಬಂದ ಇಬ್ಬರು ನನ್ನ ಹಿರಿಯ ಮಗಳ ಮೇಲೆ ಆಸಿಡ್ ಎಸೆದು ಓಡಿದ್ದಾರೆ.. ಅವರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು ಎಂದು ಹುಡುಗಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟರ್ ಹ್ಯಾಂಡಲ್ ತಡೆಹಿಡಿದ ಸರ್ಕಾರ

ಮಗಳು ಯಾರಾದರೂ ಕಿರುಕುಳ ನೀಡಿದ್ದರ ಬಗ್ಗೆ ಹೇಳಿದ್ದಳೇ ಎಂಬ ಪ್ರಶ್ನೆಗೆ ಆಕೆಯ ತಂದೆ “ಇಲ್ಲ ಎಂದು ಉತ್ತರಸಿದರು. ಸಹೋದರಿಯರು ಮೆಟ್ರೋದಲ್ಲಿ ಒಟ್ಟಿಗೆ ಶಾಲೆಗೆ ಹೋಗುತ್ತಾರೆ” ಎಂದು ಹೇಳಿದರು.
ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳನ್ನು ತಡೆಯಲು ಆಸಿಡ್ ಮಾರಾಟವನ್ನು ಏಕೆ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

ದೇಶದ ರಾಜಧಾನಿಯಲ್ಲಿ ಹಗಲು ಹೊತ್ತಿನಲ್ಲಿ ಇಬ್ಬರು ಗೂಂಡಾಗಳು ವಿದ್ಯಾರ್ಥಿನಿಯ ಮೇಲೆ ಆಸಿಡ್ ಎರಚಿದ್ದಾರೆ. ಯಾರಿಗಾದರೂ ಕಾನೂನಿಗೆ ಭಯವಿದೆಯೇ? ಆಸಿಡ್ ಮಾರಾಟವನ್ನು ಏಕೆ ನಿಷೇಧಿಸಬಾರದು? ನಾಚಿಕೆಗೇಡಿನ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಪೋಸ್ಟ್‌ನಲ್ಲಿ ಅವರು ತರಕಾರಿಗಳಂತೆ ಸುಲಭವಾಗಿ ಆಸಿಡ್ ಲಭ್ಯವಿದೆ ಎಂದು ಹೇಳಿದ್ದಾರೆ ಮತ್ತು ಸರ್ಕಾರವು ಅದರ ಚಿಲ್ಲರೆ ಮಾರಾಟವನ್ನು ಏಕೆ ನಿಷೇಧಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ದೆಹಲಿಯ ಮಹಿಳಾ ಆಯೋಗವು ಈ ನಿಷೇಧಕ್ಕೆ ಹಲವು ವರ್ಷಗಳಿಂದ ಒತ್ತಾಯಿಸುತ್ತಿದೆ. ಸರ್ಕಾರಗಳು ಯಾವಾಗ ಎಚ್ಚೆತ್ತುಕೊಳ್ಳುತ್ತವೆ? ಎಂದು ಪ್ರಶ್ನಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಭಾರತದಲ್ಲಿ 3000 ದಾಟಿದ ದೈನಂದಿನ ಕೋವಿಡ್ -19 ಪ್ರಕರಣ : ಇದು ಆರು ತಿಂಗಳಲ್ಲಿ ಅತಿ ಹೆಚ್ಚು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement