ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್‌. ಪಾಟೀಲ, ಮುಖಂಡ ಶ್ರೀನಿವಾಸ ಭಟ್‌ ದಾತ್ರಿ

ಬೆಂಗಳೂರು: ಇಂದು ಗುರುವಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲ ಹಾಗೂ ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಪ್ರಮುಖ ಶ್ರೀನಿವಾಸ ಭಟ್‌ ದಾತ್ರಿ ಶ್ರೀನಿವಾಸ ಭಟ್‌ ದಾತ್ರಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹಮ್ಮದ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಪಕ್ಷದ ಧ್ವಜ ನೀಡಿ ವಿ.ಎಸ್‌.ಪಾಟೀಲ ಹಾಗೂ ಶ್ರೀನಿವಾಸ ಭಟ್‌ ದಾತ್ರಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿಯಿಂದ 2018 ರ ವಿಧಾನಸಭೆ ಚುನಾವಣೆಯಲ್ಲಿ ಯಲ್ಲಾಪುರ-ಮುಂಡಗೋಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿ.ಎಸ್. ಪಾಟೀಲ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಶಿವರಾಮ ಹೆಬ್ಬಾರ ವಿರುದ್ಧ ಅಲ್ಪಮತಗಳ ಅಂತರದಿಂದ ಸೋಲನುಭವಿಸಿದ್ದರು.
ನಂತರ ಬದಲಾದ ಸನ್ನಿವೇಶದಲ್ಲಿ ಶಿವರಾಮ ಹೆಬ್ಬಾರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಸಚಿವರಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ಶಿವರಾಮ ಹೆಬ್ಬಾರ ಅವರು ಬಿಜೆಪಿಯಿಂದಲೇ ಸ್ಪರ್ಧಿಸಲಿರುವುದರಿಂದ ವಿ.ಎಸ್. ಪಾಟೀಲ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ ಹಾಗೂ ಮುಂದಿನ ಚುನಾವಣೆಯಲ್ಲಿ ಅವರು ಯಲ್ಲಾಪುರ-ಮುಂಡಗೋಡು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದೆ. ಇವರ ಜೊತೆಗೆ   ಶ್ರೀನಿವಾಸ ಭಟ್‌ ದಾತ್ರಿ ಸಹ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ, ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ಗೆ ಬರುತ್ತಿದ್ದಾರೆ. ವಿ.ಎಸ್‌.ಪಾಟೀಲ ಅವರು ಅಬ್ದುಲ್‌ ಕಲಾಂ ಅವರು ರಾಷ್ಟ್ರಪತಿಗಳಾಗಿದ್ದ ಸಂದರ್ಭದಲ್ಲಿ ಅವರಿಂದ ಉತ್ತಮ ಶಾಸಕ ಪ್ರಶಸ್ತಿ ಪಡೆದಿದ್ದರು ಎಂದು ಹೇಳಿದರು.
ಕ್ಷೇತ್ರವಾರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಾರಕ್ಕೊಂದು ಸಭೆ ನಡೆಸಲಾಗುವುದು. ಆಕಾಂಕ್ಷಿಗಳ ಅರ್ಜಿಗಳು ತುಂಬಾ ಇವೆ, ಯಾರ ಹೆಸರನ್ನು ಸದ್ಯಕ್ಕೆ ಬಹಿರಂಗ ಮಾಡುವುದಿಲ್ಲ. ಪ್ರತಿವಾರ ಸಭೆ ನಡೆಸಲಾಗುವುದು. ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.
ಚುನಾವಣೆ ತಯಾರಿ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಪ್ರವಾಸ ನಡೆಸಲು ಈಗಾಗಲೇ ದೆಹಲಿಯಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗಿದೆ. ಅದರಂತೆ ನಮ್ಮ ಪ್ರವಾಸ ನಡೆಯಲಿದೆ. ಆರಂಭದಲ್ಲಿ ನಾನು ಮತ್ತು ಸಿದ್ದರಾಮಯ್ಯ ಅವರು 20 ಜಿಲ್ಲೆಗಳಲ್ಲಿ ಜೊತೆಯಾಗಿ ಪ್ರವಾಸ ನಡೆಸುತ್ತೇವೆ. ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಉಳಿದ ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ ನಡೆದಿದೆ. ಅಲ್ಲಿ ಚುನಾವಣೆ ಸಮೀಪ ಬಂದಾಗ ಕಾರ್ಯಕ್ರಮ ನಡೆಸುವುದು ಸೂಕ್ತ ಎಂದು ಚರ್ಚಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

3.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement