ದೆಹಲಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂವರ ಬಂಧನ, ಫ್ಲಿಪ್‌ಕಾರ್ಟ್‌ನಲ್ಲಿ ಆರ್ಡರ್‌ ಮಾಡಿ ಆ್ಯಸಿಡ್ ಖರೀದಿಸಿದ್ದ ಖದೀಮರು…!

ನವದೆಹಲಿ: ದೆಹಲಿಯಲ್ಲಿ 17 ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದು, ಬಂಧಿತ ಮೂವರು ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಸೂಕ್ಷ್ಮವಾಗಿ ದಾಳಿಯನ್ನು ಯೋಜಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ಆ್ಯಸಿಡ್ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ 12 ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಆರೋಪಿಗಳನ್ನು ಸಚಿನ್ ಅರೋರಾ (20), ಹರ್ಷಿತ್ ಅಗರ್ವಾಲ್ (19) ಮತ್ತು ವೀರೇಂದ್ರ ಸಿಂಗ್ (22) ಎಂದು ಗುರುತಿಸಲಾಗಿದೆ;
ಸಚಿನ್ ಮತ್ತು ಹರ್ಷಿತ್ ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ಎರಚಲು ಮೋಟಾರ್ ಸೈಕಲ್ ನಲ್ಲಿ ಬಂದಿದ್ದರು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ವೀರೇಂದ್ರ ಅವರು ಸಚಿನ್ ಅವರ ಸ್ಕೂಟರ್ ಮತ್ತು ಮೊಬೈಲ್ ಫೋನ್ ಅನ್ನು ಮತ್ತೊಂದು ಸ್ಥಳಕ್ಕೆ ಕೊಂಡೊಯ್ದು ಗೊಂದಲ ಸೃಷ್ಟಿಸಿ ಪೊಲೀಸರನ್ನು ದಾರಿ ತಪ್ಪಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಫ್ಲಿಪ್‌ಕಾರ್ಟ್‌ನಿಂದ ಆ್ಯಸಿಡ್‌ಗೆ ಆರ್ಡರ್‌ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ ಪ್ರೀತ್ ಹೂಡಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿನ್ ಮತ್ತು ವಿದ್ಯಾರ್ಥಿನಿ ಒಬ್ಬರಿಗೊಬ್ಬರು ಪರಿಚಿತರು, ಆದರೆ ಸೆಪ್ಟೆಂಬರ್‌ನಲ್ಲಿ ಅವರಿಬ್ಬರ ನಡುವೆ ಮನಸ್ತಾಪವಾಯಿತು, ನಂತರ ಸಚಿನ್ ಆ್ಯಸಿಡ್ ದಾಳಿಯ ಬಗ್ಗೆ ನಿರ್ಧರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆಯ ಸಮಯದಲ್ಲಿ, ತಾಂತ್ರಿಕ ಪುರಾವೆಗಳ ಆಧಾರದ ಮೇಲೆ ಆರೋಪಿಗಳು ಫ್ಲಿಪ್‌ಕಾರ್ಟ್‌ನಿಂದ ಆ್ಯಸಿಡ್ ಅನ್ನು ಸಂಗ್ರಹಿಸಿದ್ದಾರೆ ಎಂದು ಕಂಡುಬಂದಿದೆ. ಈ ವಿಷಯದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೂಡಾ ಹೇಳಿದರು.

ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ಪತ್ತೆಗೆ ಹಿರಿಯ ಅಧಿಕಾರಿ ಎಂ ಹರ್ಷವರ್ಧನ್ ನೇತೃತ್ವದಲ್ಲಿ ತಂಡಗಳನ್ನು ರಚಿಸಿದರು.
ಸಾಕ್ಷಿಗಳು ಮತ್ತು ಸ್ಥಳೀಯ ಮೂಲಗಳಿಂದ ಅಭಿವೃದ್ಧಿಪಡಿಸಿದ ಮಾಹಿತಿಯ ಆಧಾರದ ಮೇಲೆ, ಆರೋಪಿಗಳನ್ನು ಗುರುತಿಸಲಾಗಿದೆ ಮತ್ತು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹದಿಹರೆಯದ ವಿದ್ಯಾರ್ಥಿನಿಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಗೆ ಶೇಕಡಾ 8 ರಷ್ಟು ಸುಟ್ಟ ಗಾಯಗಳಾಗಿವೆಗಾಯದ 48-72 ಗಂಟೆಗಳ ನಡುವೆ ಸುಟ್ಟಗಾಯಗಳು ಎಷ್ಟು ಆಳವಾಗಿವೆ ಎಂದು ತಿಳಿಯುತ್ತದೆ. ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ದೆಹಲಿ ಮಹಿಳಾ ಸಮಿತಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಇಂತಹ ಘೋರ ಅಪರಾಧಗಳನ್ನು ತಡೆಯಲು ಆ್ಯಸಿಡ್ ಮಾರಾಟವನ್ನು ಏಕೆ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement