ಸುಲಿಗೆ ಯತ್ನದ ಆರೋಪ: ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷನ ಬಂಧನ

ಮಂಗಳೂರು: ಚಿನ್ನ ಮತ್ತು ನಗದು ಬೇಡಿಕೆ ಈಡೇರದಿದ್ದರೆ ಉದ್ಯಮಿಯೊಬ್ಬರ ಖಾಸಗಿ ಮಾಹಿತಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಕೋವೂರು ನಿವಾಸಿ ಸುರೇಶ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಾವು ಮತ್ತು ಪವಿತ್ರನ್ ಸುರತ್ಕಲ್‌ನಲ್ಲಿ ಪಾಲುದಾರಿಕೆ ಆಧಾರದ ಮೇಲೆ ವ್ಯಾಪಾರ ಮಾಡಲು ನಿರ್ಧರಿಸಿದ್ದೆವು ಎಂದು ತಿಳಿಸಿದ್ದಾರೆ.
ನಂತರ, ಪವಿತ್ರನ್ ಅವರ ಸಂಶಯಾಸ್ಪದ ವ್ಯಾಪಾರ ವ್ಯವಹಾರಗಳ ಬಗ್ಗೆ ಹೆಚ್ಚು ತಿಳಿದುಕೊಂಡ ನಂತರ, ತಾವಯ ಅದರಿಂದ ಹೊರಗುಳಿರುವುದಾಗಿ ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಪವಿತ್ರನ್, ಸುರೇಶ್ ಅವರ ಲ್ಯಾಪ್‌ಟಾಪ್ ಅನ್ನು ರಹಸ್ಯವಾಗಿ ಕಿತ್ತುಕೊಂಡು, ಚಿನ್ನ ಮತ್ತು ನಗದು ಬೇಡಿಕೆಗೆ ಮಣಿಯದಿದ್ದರೆ ಕಂಪ್ಯೂಟರ್‌ನಲ್ಲಿರುವ ಅವರ ಖಾಸಗಿ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿ ಕೈಕಾಲುಗಳನ್ನು ಕತ್ತರಿಸುವುದಾಗಿಯೂ ತನಗೆ ಬೆದರಿಕೆ ಹಾಕಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement