ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 25ರಂದು ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಮೂವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

posted in: ರಾಜ್ಯ | 0

ಕುಮಟಾ:ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಹಾಗೂ ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭ ಡಿಸೆಂಬರ್‌ 25ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಡಿಸೆಂಬರ್‌ 25ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದ್ದು, ಕುಮಟಾದ ವಿಠ್ಠಲ ರಾಮ ನಾಯಕ, ಕೂಜಳ್ಳಿಯ ಎಂ.ಜಿ. ಭಟ್ಟ ಹಾಗೂ ಸ್ವರ ಸಂಗಮದ ಅಧ್ಯಕ್ಷ ಎಸ್.ಜಿ. ಭಟ್ಟ ಪಾಲ್ಗೊಳ್ಳಲಿದ್ದಾರೆ. ನಂತರ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಪ್ರಶಸ್ತಿ ಪ್ರದಾನ
ಖ್ಯಾತ ಹಿಂದುಸ್ಥಾನೀ ಗಾಯಕ ಪಂ. ಸೋಮನಾಥ ಮರ್ಡೂರು, ತಬಲಾ ವಾದಕ ಎನ್‌.ಎಸ್‌ಹೆಗಡೆ (ಮರಣೋತ್ತರ) ಹಾಗೂ ಯಕ್ಷಗಾನದ ಖ್ಯಾತ ಭಾಗವತ ಗೋಳಗೋಡು ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ.ಹೆಗಡೆ) ಅವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಷಡಕ್ಷರಿ ಗವಾಯಿ ಅಕಾಡೆಮಿ ಅಧ್ಯಕ್ಷ ವಸಂತ ರಾವ್, ಡಾ.ಸದಾನಂದ ಪೈ, ಶಿವಾನಂದ ಹೆಗಡೆ ಕಡತೋಕ, ಡಾ.ವಿನಾಯಕ ಸುಬ್ರಹ್ಮಣ್ಯಂ, ಮಂಜುನಾಥ ಭಟ್ಟ ಸುವರ್ಣಗದ್ದೆ, ಡಾ. ಅಶ್ವಿನಿ ಶಾನಭಾಗ ಅವರು ಪಾಲ್ಗೊಳ್ಳಲಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿ,ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ; ನಂತರ ತಾನೂ ನೇಣಿಗೆ ಶರಣು

ಡಿಸೆಂಬರ್‌ 25ರಂದು ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೂ ವಿವಿಧ ಕಲಾವಿದರುಗಳಿಂದ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಕೂಜಳ್ಳಿಯ ಸ್ವರ ಸಂಗಮ ಹಾಗೂ ಕುಮಟಾದ ಗಂಧರ್ವ ಕಲಾಕೇಂದ್ರದ ಸಹಕಾರದಲ್ಲಿ ಆಯೋಜಿಸಲಾಗಿದೆ ಎಂದು ಪಂ.ಷಡಕ್ಷರಿ ಗವಾಯಿ ಅಕಾಡೆಮಿ ತಿಳಿಸಿದೆ.
ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ಧಾರವಾಡದ ಸೋಮನಾಥ ಮರ್ಡೂರು, ಮುಂಬೈನ ಮಿಲಿಂದ ಚಿತ್ತಾಲ ಅವರಿಂದ ಗಾಯನ ಕಾರ್ಯಕ್ರಮವಿದೆ. ಬೆಳಿಗ್ಗೆ ಬೆಳಗ್ಗೆ 9ಕ್ಕೆ ಡಾ. ಕೃಷ್ಣಮೂರ್ತಿ ಭಟ್ಟ ಶಿರಸಿ ಅವರ ಗಾಯನ ಕಾರ್ಯಕ್ರಮದ ಮೂಲಕ ಆರಂಭವಾಗಲಿದೆ. ಶಾಂತಾರಾಮ ಭಟ್ಟ ಮಾಳ್ಕೋಡು ಅವರದಿಂದ ಗಾಯನ, ಕೃಷ್ಣ ದೇವಾಡಿಗ ಅವರಿಂದ ಶಹನಾಯಿ ವಾದನ, ಕೂಜಳ್ಳಿಯ ಸುಬ್ರಾಯ ಭಟ್ಟ ಅವರಿಂದ ಸಂತೂರ್, ಬೆಂಗಳೂರಿನ ದಿವ್ಯಾ ನಾಯ್ಕ ಅವರಿಂದ ಗಾಯನ ಕಾರ್ಯಕ್ರಮ ನಡೆಯಲಿದೆ.
ಇವರಿಗೆ ಸಂವಾದಿನಿಯಲ್ಲಿ ಗೌರೀಶ ಯಾಜಿ ಕೂಜಳ್ಳಿ, ಹರಿಶ್ಚಂದ್ರ ನಾಯ್ಕ ಇಡಗುಂಜಿ, ಮಾರುತಿ ನಾಯ್ಕ ಇಡಗುಂಜಿ, ಅಜಯ ಹೆಗಡೆ ವರ್ಗಾಸರ, ತಬಲಾದಲ್ಲಿ ಗೋಪಾಲಕೃಷ್ಣ ಹೆಗಡೆ ಕಲ್ಭಾಗ, ಎನ್.ಜಿ. ಅನಂತಮೂರ್ತಿ ಗುಣವಂತೆ, ಎಂ.ವಿ. ಶೇಷಾದ್ರಿ ಅಯ್ಯಂಗಾರ, ಗಣಪತಿ ಹೆಗಡೆ ಹರಿಕೇರಿ, ಅಕ್ಷಯ ಭಟ್ಟ ಅಂಸಳ್ಳಿ, ಭರತ ಹೆಗಡೆ ಕವಲಕ್ಕಿ ಸಹಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಾರಿನ ಮೇಲೆ ಉರುಳಿದ ಕಾಂಕ್ರಿಟ್ ಮಿಕ್ಸ್ ಲಾರಿ : ತಾಯಿ-ಮಗಳು ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.3 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ

advertisement