ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಮುರುಘಾ ಶರಣರ ವಿರುದ್ಧ ಪಿತೂರಿ ಪ್ರಕರಣ: ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 15ರ ತಡರಾತ್ರಿ ದಾವಣಗೆರೆಯಲ್ಲಿ ಸೌಭಾಗ್ಯ ಬಸವರಾಜನ್ ಅವರನ್ನು ಬಂಧಿಸಲಾಗಿದೆ. ಬಸವರಾಜನ್‌ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.9 ರಂದು ದೂರು ದಾಖಲಾಗಿದ್ದು, ನವೆಂಬರ್ 10ರಂದು ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಬಂಧನವಾಗಿತ್ತು. ಆದರೆ ಸೌಭಾಗ್ಯ ಬಸವರಾಜನ್ ತಲೆಮರೆಸಿಕೊಂಡಿದ್ದರು. ಈಗ ಅವರನ್ನು ಪೋಲಿಸರು ಬಂಧಿಸಿದ್ದಾರೆ.
ಮುರುಘಾ ಶ್ರೀಗಳ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿ ಸೌಭಾಗ್ಯ ವಿರುದ್ಧವೂ ದೂರು ದಾಖಲಾಗಿತ್ತು. ಬಂಧನ ಭೀತಿ ಎದುರಿಸುತ್ತಿದ್ದ ಸೌಭಾಗ್ಯ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೌಭಾಗ್ಯ ಅವರ ಪತಿ ಎಸ್‌.ಕೆ. ಬಸವರಾಜನ್‌ ಸೇರಿದಂತೆ ಕೆಲವರನ್ನು ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

 

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement