ನವದೆಹಲಿ; ಆಘಾತಕಾರಿ ಘಟನೆಯೊಂದರಲ್ಲಿ, 5ನೇ ತರಗತಿಯ ವಿದ್ಯಾರ್ಥಿನಿಯನ್ನು ಕತ್ತರಿಯಿಂದ ಹೊಡೆದು ನಂತರ ಶಾಲೆಯ ಕಟ್ಟಡದ ಮೊದಲ ಮಹಡಿಯಿಂದ ಎಸೆದ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿಯನ್ನು ಮಧ್ಯ ದೆಹಲಿಯ ಮಾಡೆಲ್ ಬಸ್ತಿ ಪ್ರದೇಶದ ಪ್ರಾಥಮಿಕ ವಿದ್ಯಾಲಯದ ತರಗತಿ ಶಿಕ್ಷಕಿ ಗೀತಾ ದೇಶ್ವಾಲ್ ಎಂದು ಗುರುತಿಸಲಾಗಿದ್ದು, ಮೊದಲು ಬಾಲಕಿಯನ್ನು ಸಣ್ಣ ಕತ್ತರಿಗಳಿಂದ ಹೊಡೆದು ನಂತರ ಕಟ್ಟಡದ ಮೊದಲ ಮಹಡಿಯಿಂದ ಎಸೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನೊಬ್ಬ ಶಿಕ್ಷಕಿ ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದರೂ ಅದು ವ್ಯರ್ಥವಾಯಿತು ಎಂದು ವರದಿಗಳು ತಿಳಿಸಿವೆ.
ಗಾಯಗೊಂಡಿರುವ ಬಾಲಕಿ ಹಿಂದೂ ರಾವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಪ್ರತ್ಯಕ್ಷದರ್ಶಿಯ ಹೇಳಿಕೆಯ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.
“ವಿದ್ಯಾರ್ಥಿಯನ್ನು ಹಿಂದೂ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲಾ ಅಗತ್ಯ ಪರೀಕ್ಷೆಗಳನ್ನು ಮಾಡಲಾಗಿದೆ. ಮಗು ಸುರಕ್ಷಿತ ಮತ್ತು ಸ್ಥಿರವಾಗಿದೆ ಮತ್ತು ಉತ್ತಮವಾಗಿ ಪ್ರತಿಕ್ರಿಯಿಸುತ್ತಿದೆ ಎಂದು ತಿಳಿಸಿದ್ದಾರೆ.
ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಕೂಡ ಶಿಕ್ಷಕಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಹೆಚ್ಚಿನ ತನಿಖೆಯನ್ನು ಇಲಾಖೆ ನಡೆಸುತ್ತಿದೆ ಎಂದು ಎಂಸಿಡಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ