ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ ಬೆಂಗಳೂರಿಗೆ ಸ್ಥಳಾಂತರ

posted in: ರಾಜ್ಯ | 0

ಮಂಗಳೂರು: ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನವೆಂಬರ್‌ 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ನನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್‌ ಶಾರೀಕ್‌ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಶನಿವಾರ (ಡಿಸೆಂಬರ್‌ 17) ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಲ್ಲಿಂದಲೇ ತನಿಖೆ ನಡೆಸಲಿದೆ. ನವೆಂಬರ್‌ 19ರ ಶನಿವಾರ ಸಂಜೆ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಸಂಭವಿಸಿದ ವೇಳೆ ಅದನ್ನು ಒಯ್ಯುತ್ತಿದ್ದ ಶಾರೀಕ್‌ ಗಂಭೀರ ಗಾಯಗೊಂಡಿದ್ದ. ಆತನನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಕಣ್ಣಿಗೂ ಹಾನಿಯಾಗಿತ್ತು. ಇದೀಗ ಚೇತರಿಕೆ ಕಂಡಿದ್ದು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಟೋಲ್‌ ಸಂಗ್ರಹ ಆರಂಭವಾದ 17 ದಿನದಲ್ಲೇ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇ ಟೋಲ್ ದರ ಶೇಕಡಾ 22ರಷ್ಟು ಹೆಚ್ಚಳ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement