ಮನೆಗೆ ಬೆಂಕಿ ತಗುಲಿ 6 ಮಂದಿ ಸಜೀವ ದಹನ

ಹೈದರಾಬಾದ್‌: ತೆಲಂಗಾಣದ ಮಂಚಾರ್ಯಾಲಾ ಜಿಲ್ಲೆಯಲ್ಲಿ ಶನಿವಾರ ಮನೆಯೊಂದರಲ್ಲಿ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಆರು ಸದಸ್ಯರು ದಹನಗೊಂಡಿದ್ದಾರೆ.
ಅಪಘಾತದಲ್ಲಿ ಮನೆ ಮಾಲೀಕ ಶಿವಯ್ಯ (50), ಪತ್ನಿ ಪದ್ಮಾ (45), ಪದ್ಮಾ ಅವರ ಅಕ್ಕನ ಮಗಳು ಮೌನಿಕಾ (23) ಮತ್ತು ಅವರ ಇಬ್ಬರು ಪುತ್ರಿಯರು ಸಾವಿಗೀಡಾಗಿದ್ದಾರೆ.ಮಂದಮರಿ ಸರ್ಕಲ್ ಇನ್ಸ್‌ಪೆಕ್ಟರ್ ಆಫ್ ಪೊಲೀಸ್ ಪ್ರಮೋದ್ ಕುಮಾರ್ ಮಾತನಾಡಿ, ತೆಲಂಗಾಣದ ಮಂದಮರ್ರಿ ಮಂಡಲದ ವೆಂಕಟಾಪುರದ ಮನೆಯಲ್ಲಿ ಶಿವಯ್ಯ ಮತ್ತು ಅವರ ಪತ್ನಿ ಪದ್ಮಾ ವಾಸವಾಗಿದ್ದರು. ಎರಡು ದಿನಗಳ ಹಿಂದೆ ಪದ್ಮಾ ಅವರ ಅಕ್ಕನ ಮಗಳು ಮೌನಿಕಾ, ಇಬ್ಬರು ಹೆಣ್ಣುಮಕ್ಕಳು ಮತ್ತು ಶಾಂತಯ್ಯ ಎಂಬ ಮಹಿಳೆ ಆಗಮಿಸಿದ್ದರು. ರಾತ್ರಿ 12:00 ರಿಂದ 12:30ರ ನಡುವೆ ಅವರ ಮನೆಯಲ್ಲಿ ದೊಡ್ಡ ಬೆಂಕಿ ಹೊತ್ತಿಕೊಂಡಿರುವುದನ್ನು ನೆರೆಹೊರೆಯವರು ಗಮನಿಸಿದ್ದಾರೆ ಎಂದು ಕುಮಾರ ಹೇಳಿದರು.
ಕೂಡಲೇ ಗ್ರಾಮಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲಿಗೆ ತಲುಪುವಷ್ಟರಲ್ಲಿ ಇಡೀ ಮನೆಗೆ ಬೆಂಕಿ ಬಿದ್ದಿತ್ತು. ಮಾಹಿತಿಯ ಪ್ರಕಾರ, ಮನೆಯಲ್ಲಿದ್ದ ಒಟ್ಟು ಆರು ಸದಸ್ಯರು ಸಾವಿಗೀಡಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಂಕಿ ಅನಾಹುತಕ್ಕೆ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ 2859 ಹುದ್ದೆಗಳಿಗೆ ಅರ್ಜಿ ಆಹ್ವಾನ : ಪದವಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಬಹುದು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement