ಹೊಸದಾಗಿ 921 ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ ಜೊತೆ ಬಿಎಂಟಿಸಿ ಒಪ್ಪಂದ

ಬೆಂಗಳೂರು; ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆ, ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ ಕಂಪನಿಯು ಲೋ-ಫ್ಲೋರ್ ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸಲಿದೆ ಹಾಗೂ ಮುಂದಿನ 12 ವರ್ಷಗಳ ಅವಧಿಗೆ ನಗರದಲ್ಲಿ ಅವುಗಳ ಓಡಾಟದ ಜೊತೆಗೆ ನಿರ್ವಹಣೆಯ ಜವಾಬ್ದಾರಿಯನ್ನು ಅದಕ್ಕೆ ನೀಡಲಾಗುತ್ತದೆ.
ಬೆಂಗಳೂರು ನಗರದ ಜೀವನಾಡಿ ಬಿಎಂಟಿಸಿ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಶುಕ್ರವಾರ ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯೊಂದಿಗೆ ಹೊಸ ಒಪ್ಪಂದಕ್ಕೆ ಸಹಿ ಹಾಕಿದ್ದು, ಬೆಂಗಳೂರು ನಗರಕ್ಕೆ 921 ಎಲೆಕ್ಟ್ರಿಕ್ ಬಸ್‌ಗಳನ್ನು ಪಡೆಯಲಿದೆ. ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ನಗರದಲ್ಲಿ ರಸ್ತೆಗಿಳಿಸಲು ಪ್ರೋತ್ಸಾಹ ನೀಡುವ FAME-II ಯೋಜನೆಯಡಿ ಈ ಒಪ್ಪಂದ ಮಾಡಿಕೊಳ್ಳಲಾಗವುದು ಎಂದು ಅದು ಹೇಳಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯು ತನ್ನ ಪ್ರಯಾಣಿಕರಿಗೆ ಉತ್ತಮ ಮತ್ತು ಪರಿಸರ ಸ್ನೇಹಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಮತ್ತು ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆಯ ಮುಂದುವರಿಕೆಯ ಭಾಗವಾಗಿ, ಡಿಸೆಂಬರ್‌ 16ರಂದು ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಟಾಟಾ ಮೋಟಾರ್ಸ್ ಹೇಳಿಕೆಯ ಪ್ರಕಾರ, ಟಾಟಾ ಮೋಟಾರ್ಸ್ ಇಲ್ಲಿಯವರೆಗೆ ಭಾರತದ ಅನೇಕ ನಗರಗಳಲ್ಲಿ 730ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಸಿದೆ. ಹಾಗೂ ಈ ಬಸ್‌ಗಳು 55 ಮಿಲಿಯನ್ ಕಿಲೋಮೀಟರ್‌ಗಳಿಗಿಂತ ಹೆಚ್ಚು ಸಂಚರಿಸಿವೆ.
ಭಾರತದಲ್ಲಿ ತಯಾರಾದ ಟಾಟಾ ಸ್ಟಾರ್‌ಬಸ್ ಎಲೆಕ್ಟ್ರಿಕ್, 12 ಮೀಟರ್ ಉದ್ದದ ವಾಹನವಾಗಿದ್ದು, ಸುಸ್ಥಿರ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ಉತ್ತಮ ವಿನ್ಯಾಸ ಮತ್ತು ಅತ್ಯುತ್ತಮ ದರ್ಜೆಯ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರಮುಖ ಸುದ್ದಿ :-   ಎಸ್‌ಐಆರ್‌-2026 ಅಂತಿಮ ಪಟ್ಟಿ ಪ್ರಕಟ ; ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 11,39,623 ಮತದಾರರು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement