ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ (State govt) ಆದೇಶ ಹೊರಡಿಸಿದೆ. ಗ್ರಾಪಂ. ಅಧ್ಯಕ್ಷರ ಗೌರವಧನ 3 ಸಾವಿರದಿಂದ 6 ಸಾವಿರ,, ಗ್ರಾ.ಪಂ. ಉಪಾಧ್ಯಕ್ಷರ ಗೌರವಧನ 2 ಸಾವಿರದಿಂದ 4 ಸಾವಿರ, ಗ್ರಾ.ಪಂ. ಸದಸ್ಯರ ಗೌರವಧನ 1 ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​​ರಾಜ್​ ಇಲಾಖೆ ಆದೇಶಿಸಿದೆ.
ಇತ್ತೀಚೆಗೆ ಕರ್ನಾಟಕ ಸರ್ಕಾರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಸಿಹಿಸುದ್ದಿ ನೀಡಿತ್ತು. ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಎರಡೂವರೆ ಸಾವಿರ ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.
ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಹಾಲಿ 7500 ರೂ. ಗೌರವ ಸಂಭಾವನೆ ನೀಡಲಾಗುತ್ತಿತ್ತು. ಈಗ 2500 ರೂ.ಗಳನ್ನು ಏರಿಕೆ ಮಾಡಲಾಗಿದೆ. ಹೀಗಾಗಿ ಒಟ್ಟು ಗೌರವ ಸಂಭಾವನೆ 10,000 ರೂ. ಆಗಲಿದೆ. ಇನ್ನು ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 8000 ರೂ. ಹಾಲಿ ಗೌರವ ಸಂಭಾವನೆ ಇತ್ತು. 2500 ರೂ. ಏರಿಕೆ ಮಾಡಲಾಗಿದೆ. ಪರಿಷ್ಕೃತ ಆದೇಶದ ಪ್ರಕಾರ 10,500 ರೂ. ಗೌರವ ಸಂಭಾವನೆ ದೊರೆಯಲಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

3.9 / 5. 8

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement